ಕರ್ನಾಟಕ

karnataka

ETV Bharat / state

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ‌ ನೇಮಕಾತಿ: ಸೆ.22ರಂದು ಲಿಖಿತ ಪರೀಕ್ಷೆ - 18,500 ಅಭ್ಯರ್ಥಿಗಳು

ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಹಾಗೂ ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಗರದ 26 ಕೇಂದ್ರಗಳಲ್ಲಿ ಪರೀಕ್ಷೆ‌ ನಡೆಯಲಿದ್ದು, ಈ ಕುರಿತು ಇಲಾಖಾ ವೆಬ್‌ಸೈಟ್ ನಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಕಾನ್ಸ್‌ಟೇಬಲ್​​ ಹುದ್ದೆಗಳ ನೇಮಕಾತಿ

By

Published : Sep 14, 2019, 4:01 AM IST

ಬೆಂಗಳೂರು: ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಹಾಗೂ ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.22ರಂದು ನಗರದ 26 ಕೇಂದ್ರಗಳಲ್ಲಿ ಪರೀಕ್ಷೆ‌ ನಡೆಯಲಿದೆ.

18,500 ಅಭ್ಯರ್ಥಿಗಳಿಗೆ ಸೆ.22ರಂದು ಬೆಳಗ್ಗೆ 10:30ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್ www.ksp.gov.inನಲ್ಲಿ ತಿಳಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಕರಪತ್ರವನ್ನು ವೆಬ್​ಸೈಟ್​ನಿಂದ ಡೌನ್‌ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸದ್ಯ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details