ಬೆಂಗಳೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೌಡನಪಾಳ್ಯದ ಮಂಜುನಾಥ ನಗರದಲ್ಲಿ ನಡೆದಿದೆ.
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ, ಕಾರಣ ನಿಗೂಢ
ಗೌಡನಪಾಳ್ಯ ಮಂಜುನಾಥ ನಗರದ ನವೀನ್ ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಯುವಕ ಆತ್ಮಹತ್ಯೆ
ಗೌಡನಪಾಳ್ಯ ಮಂಜುನಾಥ ನಗರದ ನವೀನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ರಾಮನಗರದ ಕನಕಪುರ ತಾಲೂಕಿನ ಬೆಟ್ಟದ ಹಲಸೂರು ಗ್ರಾಮದ ನವೀನ್, ಉತ್ತರಹಳ್ಳಿ ಮುಖ್ಯರಸ್ತೆಯ ಮಂಜುನಾಥ್ ಫರ್ನಿಚರ್‌ನಲ್ಲಿ ಕೆಲಸ ಮಾಡುತ್ತಿದ್ದನಂತೆ. ಆದ್ರೆ,ಭಾನುವಾರ ಬೆಳಗ್ಗೆ ರೂಮ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.