ಕರ್ನಾಟಕ

karnataka

By

Published : Jun 7, 2020, 12:54 AM IST

ETV Bharat / state

ಕ್ಲರ್ಕ್‌ಗಳಿಗೆ ಆರ್ಥಿಕ ನೆರವು ನೀಡಲು ಪ್ರಯತ್ನಿಸುತ್ತಿದ್ದೇವೆ: ಹೈಕೋರ್ಟ್​ಗೆ ಎಎಬಿ ಮಾಹಿತಿ

ವಕೀಲರ ಕ್ಲರ್ಕ್‌ಗಳಿಗೆ ಆರ್ಥಿಕ ನೆರವು ನೀಡಲು ಹಣ ಸಂಗ್ರಹಿಸುವಂತೆ ಹಾಗೂ ಹಣ ಸಂಗ್ರಹಕ್ಕೆ ಸಹಾಯ ಮಾಡುವಂತೆ ಬೆಂಗಳೂರು ವಕೀಲರ ಸಂಘಕ್ಕೆ ಹೈಕೋರ್ಟ್ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಂಘ, ನೆರವು ನೀಡಲು ಸಮಿತಿಯೊಂದನ್ನು ರಚಿಸಲಾಗಿದ್ದು, ಈಗಾಗಲೇ 2.5 ಲಕ್ಷ ರೂಪಾಯಿ ಹಣ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದೆ.

AAB Information to the High Court
ಹೈಕೋರ್ಟ್​ಗೆ ಎಎಬಿ ಮಾಹಿತಿ

ಬೆಂಗಳೂರು: ಲಾಕ್‌ಡೌನ್​ನಿಂದಾಗಿ ಕಳೆದೆರಡು ತಿಂಗಳಿಂದ ಕೆಲಸ ಮತ್ತು ಆದಾಯವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಕ್ಲರ್ಕ್‌ಗಳಿಗೆ ಆರ್ಥಿಕ ನೆರವು ನೀಡಲು ಹಣ ಸಂಗ್ರಹಿಸುತ್ತಿದ್ದೇವೆ ಎಂದು ಬೆಂಗಳೂರು ವಕೀಲರ ಸಂಘ (ಎಎಬಿ) ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್​ಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ವಕೀಲರ ಪರಿಷತ್‌ಗೆ ನಿರ್ದೇಶಿಸಲು ಕೋರಿ ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್‌ಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸಂಘದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.


ಅರ್ಜಿಯ ಹಿಂದಿನ ವಿಚಾರಣೆ ವಕೀಲರ ಕ್ಲರ್ಕ್‌ಗಳಿಗೆ ಆರ್ಥಿಕ ನೆರವು ನೀಡಲು ಹಣ ಸಂಗ್ರಹಿಸುವಂತೆ ಹಾಗೂ ಹಣ ಸಂಗ್ರಹಕ್ಕೆ ಸಹಾಯ ಮಾಡುವಂತೆ ಬೆಂಗಳೂರು ವಕೀಲರ ಸಂಘಕ್ಕೆ ಹೈಕೋರ್ಟ್ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಂಘ, ನೆರವು ನೀಡಲು ಸಮಿತಿಯೊಂದನ್ನು ರಚಿಸಲಾಗಿದ್ದು, ಈಗಾಗಲೇ 2.5 ಲಕ್ಷ ರೂಪಾಯಿ ಹಣ ಸಂಗ್ರಹಿಸಲಾಗಿದೆ. ಹಿರಿಯ ವಕೀಲರಿಂದಲೂ ಹಣ ಸಂಗ್ರಹಿಸಿ ಕೊಡಲು ಪ್ರಯತ್ನಿಸುತ್ತೇವೆ ಎಂದು ಪೀಠಕ್ಕೆ ಮಾಹಿತಿ ನೀಡಿದ್ದಾರೆ.


ಸಂಘದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ಪೀಠ, ಎಎಬಿ ಉತ್ತಮ ಮಾರ್ಗದಲ್ಲಿ ಹೆಜ್ಜೆ ಇಟ್ಟಿದೆ ಎಂದು ಮೆಚ್ಚುಗೆ ವಕ್ತಪಡಿಸಿದೆ. ಇದೇ ವೇಳೆ ಕ್ಲರ್ಕ್‌ಗಳಿಗೆ ಪರಿಹಾರ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಜೂ.12 ಕ್ಕೆ ಮುಂದೂಡಿದೆ.

ABOUT THE AUTHOR

...view details