ಕರ್ನಾಟಕ

karnataka

ETV Bharat / state

ಹೆಚ್ ವಿಶ್ವನಾಥ್‌ಗೆ 15 ಕೋಟಿ ರೂಪಾಯಿ: ತನಿಖೆ ಕೋರಿ ಚುನಾವಣಾ ಆಯೋಗ, ಇಡಿಗೆ ಆಪ್ ದೂರು - H Vishwanath reactions

ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್‌ ಹಾಗೂ ಬಿಜೆಪಿ ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ಇವರಿಬ್ಬರನ್ನೂ ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

AAP filed complaint against H Vishwanath and V Srinivas Prasad
AAP filed complaint against H Vishwanath and V Srinivas Prasad

By

Published : Dec 19, 2022, 6:44 PM IST

ಬೆಂಗಳೂರು:ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಹೆಚ್ ವಿಶ್ವನಾಥ್‌ ಅವರಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಬಿಜೆಪಿ ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ಒಪ್ಪಿಕೊಂಡಿರುವ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿಯು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ.

ಈ ಸಂದರ್ಬದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ ವಿಶ್ವನಾಥ್‌ ಅವರಿಗೆ 15 ಕೋಟಿ ರೂಪಾಯಿ ಹಣ ನೀಡಿರುವುದು ಹಾಗೂ ಅದರಲ್ಲಿ ಅವರು 4 ರಿಂದ 5 ಕೋಟಿ ರೂಪಾಯಿಯನ್ನು ಖರ್ಚು ಮಾಡಿರುವ ಗಂಭೀರ ವಿಚಾರವನ್ನು ಬಿಜೆಪಿ ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ಬಹಿರಂಗಪಡಿಸಿದ್ದಾರೆ. ವಿ ಶ್ರೀನಿವಾಸ್‌ ಪ್ರಸಾದ್‌ ಕೂಡ ಚುನಾವಣೆಗೆ ಹಣ ಪಡೆದಿದ್ದಾರೆ ಎಂದು ಹೆಚ್​ ವಿಶ್ವನಾಥ್‌ ಹೇಳಿದ್ದಾರೆ.

ಈ 15 ಕೋಟಿ ರೂಪಾಯಿಯನ್ನು ಬಿಜೆಪಿ ಹೇಗೆ ಸಂಪಾದಿಸಿತು? ಅಭ್ಯರ್ಥಿ ಹೆಚ್ ವಿಶ್ವನಾಥ್‌ ಅವರಿಗೆ ಏತಕ್ಕಾಗಿ ವರ್ಗಾಯಿಸಲಾಯಿತು? ವಿಶ್ವನಾಥ್‌ 4 ಅಥವಾ 5 ಕೋಟಿ ರೂಪಾಯಿಯನ್ನು ಹೇಗೆ ಖರ್ಚು ಮಾಡಿದರು? ಉಳಿದ 10 ಕೋಟಿ ರೂಪಾಯಿ ಈಗ ಎಲ್ಲಿದೆ? ಚುನಾವಣಾ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಆದ್ದರಿಂದ ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯವು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಆಮ್‌ ಆದ್ಮಿ ಪಕ್ಷದ ಮುಖಂಡರು

ಇದೊಂದು ಬಹುದೊಡ್ಡ ಚುನಾವಣಾ ಅಕ್ರಮ. 2019ರಲ್ಲಿದ್ದ ಚುನಾವಣಾ ಆಯೋಗದ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿಯು 28 ಲಕ್ಷ ರೂಪಾಯಿಯನ್ನು ಮಾತ್ರ ಖರ್ಚು ಮಾಡಲು ಅವಕಾಶ ಇರುತ್ತದೆ. ಬಿಜೆಪಿ ಸಂಸದರೇ ಬಹಿರಂಗವಾಗಿ ಒಪ್ಪಿಕೊಂಡಿರುವಂತೆ ಬಿಜೆಪಿ ಅಭ್ಯರ್ಥಿ ಹೆಚ್​​ ವಿಶ್ವನಾಥ್‌ 4 ರಿಂದ 5 ಕೋಟಿ ರೂಪಾಯಿ ಖರ್ಚು ಮಾಡಿರುವುದು ಗರಿಷ್ಠ ಮಿತಿಗಿಂತ ಬರೋಬ್ಬರಿ 15 ಪಟ್ಟು ಹೆಚ್ಚು ಖರ್ಚು ಮಾಡಿದಂತಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್‌ ವಿ ಸದಂ ಒತ್ತಾಯಿಸಿದರು.

ಶೋಚನೀಯ ಸ್ಥಿತಿಗೆ ರಾಜಕೀಯ ವ್ಯವಸ್ಥೆ: ಆಮ್‌ ಆದ್ಮಿ ಪಾರ್ಟಿಯ ರಾಜಕೀಯ ಚಟುವಟಿಕೆ ವಿಭಾಗದ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, ಕೋಟಿಗಟ್ಟಲೆ ಹಣ ಖರ್ಚು ಮಾಡಿ ಚುನಾವಣೆ ಎದುರಿಸುವುದಲ್ಲದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಅದನ್ನು ಹೇಳಿಕೊಳ್ಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ತಲುಪಿರುವುದು ನೋವಿನ ಸಂಗತಿ.

ಹೆಚ್ ವಿಶ್ವನಾಥ್‌ ಹಾಗೂ ವಿ ಶ್ರೀನಿವಾಸ್‌ ಪ್ರಸಾದ್‌ ಇವರಿಬ್ಬರನ್ನೂ ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು. ಬಿಜೆಪಿಯೇತರ ಪಕ್ಷಗಳ ನಾಯಕರ ವಿರುದ್ಧ ನಿರಾಧಾರ ಆರೋಪ ಕೇಳಿಬಂದರೂ ಜಾರಿ ನಿರ್ದೇಶನಾಲಯ ಶೀಘ್ರವೇ ದಾಳಿ ಮಾಡುತ್ತದೆ. ನಾಯಕರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸುತ್ತದೆ. ಆದರೆ, ಬಿಜೆಪಿ ಅಭ್ಯರ್ಥಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಸ್ವತಃ ಬಿಜೆಪಿ ಸಂಸದರೇ ಬಹಿರಂಗಪಡಿಸಿ ನಾಲ್ಕು ದಿನಗಳಾದರೂ ಇನ್ನೂ ಯಾವುದೇ ದಾಳಿ ಮಾಡದಿರಲು ಕಾರಣವೇನು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಉದ್ದೇಶಪೂರ್ವಕವಾಗಿ ನನ್ನನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ: ಡಿಕೆಶಿ

ABOUT THE AUTHOR

...view details