ಕರ್ನಾಟಕ

karnataka

ETV Bharat / state

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಅಬ್ದುಲ್ ಅಜೀಮ್ ಮರು ನೇಮಕ - ಬಿಜೆಪಿ ಮುಖಂಡ ಅಬ್ದುಲ್ ಅಜೀಮ್

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್ ಅಜೀಮ್ ಅವರನ್ನು ಮರು ನೇಮಕ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಲಾಗಿದೆ.

Abdul Azeem
ಅಬ್ದುಲ್ ಅಜೀಮ್

By

Published : Oct 16, 2022, 8:57 AM IST

ಬೆಂಗಳೂರು:ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಬಿಜೆಪಿ ಮುಖ‌ಂಡ ಅಬ್ದುಲ್ ಅಜೀಮ್ ಅವರನ್ನು ಮರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2019 ಅಕ್ಟೋಬರ್ 15 ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಅಬ್ದುಲ್ ಅಜೀಮ್ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಆದರೆ ಅವರ ಅಧಿಕಾರ ಅವಧಿ ನಿನ್ನೆಗೆ ಮುಕ್ತಾಯಗೊಂಡಿತ್ತು. ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್ ಅಜೀಮ್ ಅವರನ್ನು ಮರುನಾಮ ನಿರ್ದೇಶಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಂತರ ರಾಜಕಾರಣಕ್ಕೆ ಬಂದ ಅಜೀಮ್ ಅವರು ಜೆಡಿಎಸ್​​ನಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಅವರು ಬಿಜೆಪಿಗೆ ಸೇರಿದ್ದರು.

ಇದನ್ನೂ ಓದಿ:ಸುಪ್ರೀಂ ತೀರ್ಪು ಬರೋವರೆಗೂ ಹೈಕೋರ್ಟ್ ಆದೇಶ ಪಾಲಿಸಬೇಕು: ಅಬ್ದುಲ್ ಅಜೀಮ್

ABOUT THE AUTHOR

...view details