ಕರ್ನಾಟಕ

karnataka

ETV Bharat / state

ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಸೆಟ್ಟೇರಿದ ಕಾಳಿ ಸಿನಿಮಾ.. ಅಭಿಷೇಕ್​ಗೆ ಕಾಂತಾರದ ಸಪ್ತಮಿ ಗೌಡ ನಾಯಕಿ - abhishek ambrish upcomming movie

ಅಭಿಷೇಕ್​ ಅಂಬರೀಶ್​ ಅಭಿನಯದ ಕಾಳಿ ಚಿತ್ರ ಸೈಲೆಂಟ್ ಆಗಿ ಸೆಟ್ಟೇರಿದೆ. ಅಲ್ಲದೇ ಕಾಳಿ ಚಿತ್ರದ ಮುಹೂರ್ತ ಬೆಂಗಳೂರಿನ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ.

Kn_Bng_
ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಸೆಟ್ಟೇರಿದ ಕಾಳಿ ಸಿನಿಮಾ

By

Published : Nov 28, 2022, 10:40 PM IST

ದಿವಂಗತ ಅಂಬರೀಶ್ ಅವರ ಸುಪುತ್ರ ಅಭಿಷೇಕ್ ಅಂಬರೀಶ್ ಅಮರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋದು ಗೊತ್ತಿರುವ ವಿಚಾರ. ಇನ್ನು, ಅಭಿಷೇಕ್ ನಟನೆಯ ಎರಡನೇ ಸಿನಿಮಾ ಬ್ಯಾಡ್ ಮ್ಯಾನ್ಸರ್ಸ್ ಚಿತ್ರ ಬಿಡುಗಡೆ ಆಗಿಲ್ಲ. ಇದೀಗ ಅಭಿಷೇಕ್​ ಅಂಬರೀಶ್​ ನಟಿಸುತ್ತಿರೋ ಕಾಳಿ ಚಿತ್ರ ಸೈಲೆಂಟ್ ಆಗಿ ಸೆಟ್ಟೇರಿದೆ. ಹೌದು ಪೈಲ್ವಾನ್ ಸಿನಿಮಾ ನಿರ್ದೇಶಕ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ ಕಾಳಿ ಚಿತ್ರದ ಮುಹೂರ್ತ ಬೆಂಗಳೂರಿನ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ.

ಅಭಿಷೇಕ್ ಅಂಬರೀಶ್​ಗೆ ಕಾಂತಾರ ಸಿನಿಮಾದ ನಾಯಕಿ ಸಪ್ತಮಿ ಗೌಡ ಜೋಡಿಯಾಗುತ್ತಿದ್ದಾರೆ‌. 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ಕಾಳಿ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ. ಸುದೀಪ್​ ಅಭಿನಯದ ಪೈಲ್ವಾನ್​ ಚಿತ್ರವನ್ನು ನಿರ್ಮಿಸುವ ಮೂಲಕ ಪ್ರಾರಂಭವಾದ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯು, ಆ ನಂತರ ಪುನೀತ್​ ರಾಜ್​ಕುಮಾರ್​ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು. ಆದರೆ, ಪುನೀತ್​ ಅವರ ಅಕಾಲಿಕ ನಿಧನದಿಂದಾಗಿ, ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೇ ಅರ್ಪಿಸಲಾಗುವುದು.

ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಸೆಟ್ಟೇರಿದ ಕಾಳಿ ಸಿನಿಮಾ

'ಕಾಳಿ' ಚಿತ್ರವು RRR ಮೋಷನ್ ಪಿಕ್ಚರ್ಸ್​ನ ಮೂರನೆಯ ಚಿತ್ರವಾಗಲಿದೆ. ಇದಲ್ಲದೆ ಕಳೆದ 8 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಪ್ರಮುಖ ನಿರ್ಮಾಪರಾಗಿ ಗುರುತಿಸಿಕೊಂಡಿರುವ ಸ್ವಪ್ನ ಕೃಷ್ಣ ಈ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಕೃಷ್ಣ ಇದಕ್ಕೂ ಮುನ್ನ 25ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 'ಮುಂಗಾರು ಮಳೆ' ಚಿತ್ರಕ್ಕಾಗಿ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಅವರು, 2014ರಲ್ಲಿ ಯಶ್ ಅಭಿನಯದ ಯಶಸ್ವಿ ಚಿತ್ರ 'ಗಜಕೇಸರಿ' ಮೂಲಕ ನಿರ್ದೇಶಕರಾದರು.

ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಸೆಟ್ಟೇರಿದ ಕಾಳಿ ಸಿನಿಮಾ

ಆ ನಂತರ ಸುದೀಪ್​ ಅಭಿನಯದಲ್ಲಿ 'ಹೆಬ್ಬುಲಿ' ಮತ್ತು 'ಪೈಲ್ವಾನ್​' ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಅವರ ನಾಲ್ಕನೇ ನಿರ್ದೇಶನದ ಚಿತ್ರ ಈ 'ಕಾಳಿ'.

ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಸೆಟ್ಟೇರಿದ ಕಾಳಿ ಸಿನಿಮಾ

'ಕಾಳಿ' ಚಿತ್ರದಲ್ಲಿ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸುತ್ತಿದ್ದು, ಇದು ಅವರ ಅಭಿನಯದ ಮೂರನೆಯ ಚಿತ್ರವಾಗಿದೆ. ಈ ಹಿಂದೆ ಕೃಷ್ಣ ನಿರ್ದೇಶನದ 'ಹೆಬ್ಬುಲಿ' ಮತ್ತು 'ಪೈಲ್ವಾನ್' ಚಿತ್ರಗಳಿಗೆ ಛಾಯಾಗ್ರಾಹಕರಾಗಿದ್ದ ಕರುಣಾಕರ್​, ಇಲ್ಲೂ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಇನ್ನು, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಟಗರು, ಸಲಗ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು. ದೀಪು ಎಸ್ ಕುಮಾರ್ ಸಂಕಲನ ಮತ್ತು ಕೆಜಿಎಫ್ ಖ್ಯಾತಿಯ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ ಚಿತ್ರಕ್ಕೆ ಇರಲಿದೆ. ಕಾಳಿ ಚಿತ್ರದಲ್ಲಿ ಅಭಿನಯಿಸುವ ಕಲಾವಿದರಿಗಾಗಿ ಡಿಸೆಂಬರ್​ನಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, 2023ರ ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಇದನ್ನೂ ಓದಿ:ಬಾಲಿವುಡ್​ನ ಖ್ಯಾತ ನಿರ್ಮಾಪಕ ಆನಂದ್ ಪಂಡಿತ್ ಪಾಲಾದ ಕಬ್ಜ ಚಿತ್ರದ ಹಿಂದಿ ವಿತರಣೆ ಹಕ್ಕು

ABOUT THE AUTHOR

...view details