ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ ಆಧಿಕಾರಿಗಳು ತನಿಖೆ ಮುಂದುವರೆಸಿದ್ದು, ನಿರೀಕ್ಷೆಗಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದೆ.
ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ ಪ್ರಕರಣ : ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಪತ್ತೆ - ಬಸವೇಶ್ವರ ನಗರ
ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ಆಧಿಕಾರಿಗಳು ತನಿಖೆ ಮುಂದುವರೆಸಿದ್ದು, ನಿರೀಕ್ಷೆಗಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದೆ.
ಸರ್ಕಾರಿ ಅಧಿಕಾರಿಗಳ ನಿವಾಸಗಳ ಎಸಿಬಿ ದಾಳಿ
ಬಸವೇಶ್ವರ ನಗರದಲ್ಲಿರುವ ಸಬ್ ರಿಜಿಸ್ಟಾರ್ ಬಿ.ಸಿ. ಸತೀಶ್ ನ ಸೇರಿದ ಬಸವೇಶ್ವರನಗರ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ ಲಾಕರ್ನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲಾಕರ್ ನಲ್ಲಿದ್ದ 38 ಲಕ್ಷ ರೂ.ಮೌಲ್ಯದ ಒಂದು ಕೆ.ಜಿ.ಮೂವತ್ತು ಗ್ರಾಂ ಚಿನ್ನಾಭರಣ ಪತ್ತೆ ಹಚ್ಚಿ ಜಪ್ತಿ ಮಾಡಿಕೊಂಡಿದ್ದಾರೆ. ಪತ್ತೆಯಾಗಿರುವ ಆಸ್ತಿಗಳ ಬಗ್ಗೆ ಅಧಿಕಾರಿಗಳು ಲೆಕ್ಕ ಇಡುತ್ತಿದ್ದಾರೆ.