ಕರ್ನಾಟಕ

karnataka

ETV Bharat / state

ಭೋವಿ ಅಭಿವೃದ್ಧಿ ನಿಗಮದಲ್ಲಿ‌ ₹150 ಕೋಟಿ ಅಕ್ರಮ ಆರೋಪ: ಎಸಿಬಿಯಿಂದ ಎಂಡಿ ಬಂಧನ - corruption in Bhovi development corporation

ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಎಸಗಿರುವ ಗಂಭೀರ ಆರೋಪದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭೋವಿ ಅಭಿವೃದ್ಧಿ ನಿಗಮದಲ್ಲಿ‌ 150 ಕೋಟಿ ಅಕ್ರಮ ಆರೋಪ: ಎಸಿಬಿಯಿಂದ ಎಂಡಿ  ಬಂಧನ
ಭೋವಿ ಅಭಿವೃದ್ಧಿ ನಿಗಮದಲ್ಲಿ‌ 150 ಕೋಟಿ ಅಕ್ರಮ ಆರೋಪ: ಎಸಿಬಿಯಿಂದ ಎಂಡಿ ಬಂಧನ

By

Published : Jun 15, 2022, 10:35 PM IST

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನು ಬಂಧಿಸಿದ್ದಾರೆ. ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ರೂ ವಂಚಿಸಿದ್ದ ಗುರುತರ ಆರೋಪ ಇವರ ವಿರುದ್ಧ ಕೇಳಿ ಬಂದಿತ್ತು. ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ವಂಚಿಸಿದ್ದ ಆರೋಪ ನಿಗಮದ ವಿರುದ್ಧವೂ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಮತ್ತು ಜನರಲ್ ಮ್ಯಾನೇಜರ್ ನಾಗರಾಜಪ್ಪ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಲು ಇಬ್ಬರಿಗೂ ಸೂಚಿಸಿದ್ದರು. ಆದರೆ ತನಿಖೆಗೆ ಸಹಕರಿಸದ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಲೀಲಾವತಿಯವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಬಿಜೆಪಿ ಸರ್ಕಾರಕ್ಕೆ ಕೇಡುಗಾಲ ಆರಂಭವಾಗಿದೆ, ಜನ ದಂಗೆ ಏಳುತ್ತಾರೆ: ಸಿದ್ದರಾಮಯ್ಯ

ABOUT THE AUTHOR

...view details