ಕರ್ನಾಟಕ

karnataka

ETV Bharat / state

ಆರೋಗ್ಯಾಧಿಕಾರಿ ಕಚೇರಿಯೂ ಭ್ರಷ್ಟ! ಎಸಿಬಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ - 75 ಸಾವಿರ ಲಂಚ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೀರಸಂದ್ರದಲ್ಲಿರುವ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

By

Published : Sep 19, 2019, 4:35 PM IST

ಬೆಂಗಳೂರು: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಡಿಹೆಚ್‌ಓ, ಎಫ್‌ಡಿಎ ಹಾಗು ಡಿ ಗ್ರೂಪ್‌ ನೌಕರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೀರಸಂದ್ರದಲ್ಲಿರುವ ಕಚೇರಿಯಲ್ಲಿ ಡಿಎಚ್ ಓ ರಾಜೇಶ್, ಎಫ್‌ಡಿಎ ನೌಕರರಾದ ಗಂಗರಾಜು, ಡಿ ಗ್ರೂಪ್ ನೌಕರ ಗುರುಪ್ರಸಾದ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ. ಈ ಆರೋಪಿಗಳನ್ನು ಡಿವೈಎಸ್ಪಿ ಗೋಪಾಲ್ ನೇತೃತ್ವದ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.

ಸೂರಜ್ ಎಂಬುವವರಿಂದ 75 ಸಾವಿರ ರೂಪಾಯಿ ಲಂಚ ಪಡೆಯುವಾಗ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ABOUT THE AUTHOR

...view details