ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ಸಹಾಯಕ ನಿರ್ದೇಶಕನಿಗೆ ಪೊಲೀಸರು ಚಳಿ ಬಿಡಿಸಿದ್ದಾರೆ.
ಸರ್ಕಾರದ ಸಹಾಯಕ ನಿರ್ದೇಶಕನಿಗೆ ಎಸಿಬಿ ಶಾಕ್: ದೇವೇಂದ್ರಪ್ಪ ಮನೆ, ಕಚೇರಿ ಮೇಲೆ ದಾಳಿ
11:10 March 02
ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಮನೆ, ಕಚೇರಿ ಮೇಲೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ. ಕಟ್ಟಡ ಕಾಮಕಾರಿಗೆ ಲಂಚ ಪಡೆದು ಟ್ರ್ಯಾಪ್ ಆಗಿದ್ದರು. ಬಳಿಕ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಎಸಿಬಿಯಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ:ಸಿಎಎ ದಂಗೆ: ಇಂದು ಆಪ್ ಉಚ್ಛಾಟಿತ ಶಾಸಕ ತಾಹೀರ್ ಹುಸೇನ್ ಜಾಮೀನು ಅರ್ಜಿ ವಿಚಾರಣೆ
ದೂರಿನನ್ವಯ ಒಂದೇ ಸಮಯದಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ದೇವೇಂದ್ರಪ್ಪ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.