ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ನಿಗಮ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ವಸಂತ ನಗರ ಬಳಿಯಿರುವ ನಿಗಮದ ಕಚೇರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಕಾರಣ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ ಲಕ್ಷಾಂತರ ರೂ. ನಗದು ಹಾಗೂ ಮಹತ್ವದ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ.
ಪರಿಶಿಷ್ಟ ಪಂಗಡದ ಭೂಮಿ ಇಲ್ಲದ ರೈತರಿಗೆ ಸರ್ಕಾರದಿಂದ ಭೂಮಿ ಖರೀದಿಸಿ ನೀಡಲಾಗುತ್ತಿತ್ತು. ಆದರೆ, ಹೀಗೆ ನೀಡುವ ಯೋಜನೆಯಡಿ ಕಡಿಮೆ ಬೆಲೆಗೆ ಭೂಮಿ ಖರೀದಿಸಿ ಸರ್ಕಾರಕ್ಕೆ ಅಧಿಕ ಲೆಕ್ಕ ನೀಡಲಾಗುತ್ತಿತ್ತು. ಪ್ರತಿ ಎಕರೆಗೆ 4ರಿಂದ 5 ಲಕ್ಷದವರೆಗೆ ಹೆಚ್ಚಿನ ಹಣ ಕೊಟ್ಟು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟದ ಮಾಡಿದ ಆರೋಪ ನಿಗಮದ ಮೇಲಿದೆ. ಈ ಮೂಲಕ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳು ಲಾಭ ಪಡೆದು ಅಕ್ರಮ ಎಸಗಿದ ಆರೋಪ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮತ್ತೊಂದೆಡೆ, ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ನಿನ್ನೆ ನಡೆಸಿದ್ದ ದಾಳಿಯನ್ನು ಎಸಿಬಿ ಅಧಿಕಾರಿಗಳು ಮುಂದುವರೆಸಿದ್ದಾರೆ.