ಬೆಂಗಳೂರು :ಹಿಂದಿನಿಂದ ವೇಗವಾಗಿ ಬಂದ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಲಹಂಕದ ಡಾಬಾ ಕ್ರಾಸ್ ಬಳಿ ನಡೆದಿದೆ.
ಸ್ಕೂಟಿಗೆ ಹಿಂದಿನಿಂದ ಗುದ್ದಿದ ಲಾರಿ, ಸಿಲಿಕಾನ್ ಸಿಟಿಯಲ್ಲಿ ಯುವತಿ ಸಾವು - ACCIDENt
ರಸ್ತೆ ಅಪಘಾತ ನಡೆದು ಯುವತಿ ಸಾವನ್ನಪ್ಪಿರುವ ಘಟನೆ ಯಲಹಂಕದ ಡಾಬಾ ಕ್ರಾಸ್ ಬಳಿ ನಡೆದಿದೆ.
ಯುವತಿ ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಯುವತಿಯ ತಲೆಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಎಂ.ಎಸ್ ಪಾಳ್ಯದಿಂದ ಬೆಟ್ಟಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತ ಯುವತಿಯ ಕುರಿತು ಮಾಹಿತಿ ಲಭ್ಯವಾಗಿಲ್ಲ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ರಾಜು ಮೋಹನನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
TAGGED:
ACCIDENt