ಬೆಂಗಳೂರು:ಇಂದು ನಗರದ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಎರಡು ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಬುಲೆಟ್‌ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಕಿರಣ್(23) ಮತ್ತು ಯತೀಶ್(22) ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಲೆಟ್ ಬೈಕ್‌ನಲ್ಲಿ ಅಮೃತಹಳ್ಳಿ ಕಡೆಯಿಂದ ಬ್ಯಾಟರಾಯನಪುರ ಸರ್ವೀಸ್ ರಸ್ತೆ ಕಡೆಗೆ ಹೋಗುವಾಗ ಕೊಡುಗೆಹಳ್ಳಿ ಜಂಕ್ಷನ್‌ನಿಂದ ಅತಿ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಉರುಳಿ ಬಿದ್ದು, ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಇಬ್ಬರು ರಕ್ತದ ಮಡುವಿನಲ್ಲೇ ಕೊನೆಯುಸೆರೆಳೆದಿದ್ದಾರೆ ಎಂದು ಹೇಳಿದ್ದಾರೆ.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ದುರಂತದಲ್ಲಿ ಮುಂಜಾನೆ 5.45 ರ ಸಂದರ್ಭದಲ್ಲಿ ರಘುವೀರ್ (27) ಎಂಬುವರು ಸ್ಕೂಟರ್‌ನಲ್ಲಿ ತೆರಳುವಾಗ ಆಯತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡು ಅಸುನೀಗಿದ್ದಾರೆ.