ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಹಿಡಿಯಲು ಹೋದ ಪೊಲೀಸರ ಕಾರನ್ನು ಹತ್ತಿಸಿಲು ಪ್ರಯತ್ನಿಸಿದ್ದ ಆರೋಪಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
ಜಾಹನ್ಸ್ ವಿಹುಂಗೆಫ್ರಿ ಕೆನಿಗೇ ಬಂಧಿತ ಆರೋಪಿ. ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 103 ಲೀಟರ್ ಮದ್ಯ ವಶಕ್ಕೆ ಪಡೆದುಕೊಳ್ಳಲಾಗಿದೆ. ಹೊರಮಾವಿನಲ್ಲಿ ಅಫ್ರಿಕನ್ ಕಿಚನ್ ಹೆಸರಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ. ಹೊರಮಾವು ಬಳಿಯ ಅಗರ ಶೆಡ್ ಬಳಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ. ಖಚಿತ ಮಹಿತಿ ಮೇರೆಗೆ ಹೆಣ್ಣೂರು ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ಕುಮಾರ್ ನೇತೃತ್ವದಲ್ಲಿ ಬಂಧಿಸಲು ಹೋದಾಗ ಆರೋಪಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಬಳಿಕ ಕಾರು ಚಲಾಯಿಸಿ ಪೊಲೀಸರ ಮೇಲೆ ಹತ್ತಿಸಲು ಮುಂದಾಗಿದ್ದ. ಹೊಯ್ಸಳ ಮೂಲಕ ಚೇಸ್ ಮಾಡಿ ಅಡ್ಡಗಟ್ಟಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.