ಪಾಕ್ ಪರ ಘೋಷಣೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಅಮೂಲ್ಯ ಲಿಯೋನ್ - Amulya Leon get back Bail application
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರೋಪಿ ಅಮೂಲ್ಯ ಲಿಯೋನ್ ಹೈಕೋರ್ಟ್ಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾಳೆ. ಅಮೂಲ್ಯ ಲಿಯೋನ್ ಸಲ್ಲಿಸಿದ್ದ ಜಾಮೀನು ಅರ್ಜಿ ನ್ಯಾ. ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ಅನುಮತಿ ನೀಡಬೇಕು ಎಂದು ಕೋರಿದರು.
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆಪಾದಿತೆ ಅಮೂಲ್ಯ ಲಿಯೋನ್, ಹೈಕೋರ್ಟ್ಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
ಅಮೂಲ್ಯ ಲಿಯೋನ್ ಸಲ್ಲಿಸಿದ್ದ ಜಾಮೀನು ಅರ್ಜಿ ನ್ಯಾ. ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ಅನುಮತಿ ನೀಡಬೇಕು ಎಂದು ಕೋರಿದರು. ಇದಕ್ಕೆ ಸಮ್ಮಿತಿಸಿದ ಪೀಠ ಅರ್ಜಿ ಹಿಂಪಡೆಯಲು ಅನುಮತಿ ನೀಡಿತು. ಅಲ್ಲದೆ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ನಂತರ ಹೈಕೋರ್ಟ್ ಮೊರೆ ಹೋಗಬಹುದು ಎಂದು ಅವಕಾಶ ಕಲ್ಪಿಸಿ ಅರ್ಜಿ ವಜಾಗೊಳಿಸಿತು.
ಇದಕ್ಕೂ ಮುನ್ನ ಉಪ್ಪಾರಪೇಟೆ ಠಾಣೆ ಪೊಲೀಸರ ಪರವಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಸರ್ಕಾರಿ ಅಭಿಯೋಜಕರು, ಪ್ರಕರಣ ಅತ್ಯಂತ ಗಂಭೀರವಾಗಿದೆ. ರಾಜದ್ರೋಹ ಆರೋಪದ ಅಡಿಯಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ ಅಮೂಲ್ಯಗೆ ಜಾಮೀನು ನೀಡಬಾರದು. ಆಕೆಯ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.