ಕರ್ನಾಟಕ

karnataka

ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣ: ಡಿಕೆಶಿ ಆಪ್ತನಿಗೆ ಸಿಬಿಐ ನೊಟೀಸ್

By

Published : Aug 25, 2022, 2:53 PM IST

2020ರಲ್ಲಿ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ‌ ನಡೆಸಿ‌ ಪ್ರಕರಣ ದಾಖಲಿಸಿಕೊಂಡಿದ್ದರು. ಇದೇ ವೇಳೆ ವಿಜಯ್ ಮನೆ ಮೇಲೆ ದಾಳಿ ನಡೆಸಿದ್ದರು.‌

Vijay Kumar Mulagund
ವಿಜಯ್ ಕುಮಾರ್ ಮುಳುಗುಂದ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಕುಮಾರ್ ಮುಳುಗುಂದ್ ಅವರಿ​ಗೆ ಆಗಸ್ಟ್​ 30ರಂದು ವಿಚಾರಣೆಗೆ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ.

2020 ಅಕ್ಟೋಬರ್‌ 5 ರಂದು ಡಿಕೆಶಿ ಮನೆ, ಕಚೇರಿ ಮತ್ತು ಆಪ್ತರ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು‌. ದಾಳಿ ಸಂಬಂಧ ವಿಚಾರಣೆಗೆ ಸಿಬಿಐ ಬುಲಾವ್ ನೀಡಿದೆ‌. ಇದೇ ವೇಳೆ ತಮ್ಮ ಕಂಪನಿಯ ಆದಾಯಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಹಾಜರುಪಡಿಸುವಂತೆ ಸೂಚಿಸಿದೆ.

74.93 ಕೋಟಿ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ‌ 2020ರಲ್ಲಿ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ‌ ನಡೆಸಿ‌ ಪ್ರಕರಣ ದಾಖಲಿಸಿಕೊಂಡಿದ್ದರು. ಇದೇ ವೇಳೆ ವಿಜಯ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿದ್ದರು.‌

ಪ್ರಕರಣ ಸಂಬಂಧ ನೋಟಿಸ್ ಜಾರಿ ಮಾಡಿರುವ ಸಿಬಿಐ ಮುಂದಿನ ದಿನಗಳಲ್ಲಿ ಡಿಕೆಶಿ ಅವರಿಗೂ ನೊಟೀಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ :ಕಿರುಕುಳಕ್ಕೂ ಒಂದು‌ ಮಿತಿ ಇದೆ, ಎಲ್ಲದಕ್ಕೂ ನಾನು ರೆಡಿ ಇದ್ದೇನೆ.. ಡಿಕೆಶಿ

ABOUT THE AUTHOR

...view details