ಬೆಂಗಳೂರು: ನಗರದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ ಇತ್ತ ಬಾಡಿಗೆ ಕೊಡಲು ಹಣವೂ ಇಲ್ಲ. ಆರೇಳು ತಿಂಗಳಾದರೂ ಗ್ಯಾಸ್ ಹಣ - ಬಾಡಿಗೆ ಹಣ ಕೊಡದೇ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಜೊತೆಗೆ ಬಿಬಿಎಂಪಿಯೂ ನಗರದ ಅಂಗನವಾಡಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜನಸಂಖ್ಯೆಗೆ ತಕ್ಕಂತೆ ಪೌಷ್ಟಿಕಾಂಶ ಆಹಾರ ಪೂರೈಕೆಯ ಯೋಜನೆಗಳನ್ನು ಜಾರಿಗೆ ತರಲು, ಮಕ್ಕಳು ಮತ್ತು ಮಹಿಳಾ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ.