ಬೆಂಗಳೂರು :ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮುಖ್ಯ ಆರೋಪಿ ನವೀನ್‌ಗೆ ಅನಾರೋಗ್ಯ ಎದುರಾಗಿದೆ. ಗೌರಿ ಹತ್ಯೆಗೆ ಸಂಬಂಧಿಸಿದಂತೆ ನವೀನ್‌ನನ್ನ ಪೊಲೀಸರು ಬಂಧಿಸಿದ್ದರು. ಇದೀಗ ಜೈಲಿನಲ್ಲಿದ್ದ ಆರೋಪಿ ನವೀನ್‌ಗೆ ಕಿಡ್ನಿ ಫೇಲ್ಯೂರ್ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎನ್ನಲಾಗಿದೆ.
ನಗರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ನವೀನ್‌ನ ದಾಖಲಿಸಿದ್ದಾರೆ. ಈತ ಕಳೆದ ಐದು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರ ತೀವ್ರ ಭದ್ರತೆಯಲ್ಲಿ ನವೀನ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜಗೆ ಕಿಡ್ನಿ ಸಮಸ್ಯೆ ಎದುರಾಗಿದೆ. ನಿನ್ನಯಷ್ಟೇ ನವೀನ್‌ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 2018ರ ಫೆಬ್ರವರಿಯಲ್ಲಿ ಪ್ರಕರಣದ ಸಂಬಂಧ ಮೊದಲ ಆರೋಪಿಯಾಗಿ ನವೀನ್‌ನನ್ನ ಬಂಧಿಸಿಲಾಗಿತ್ತು.