ಬೆಂಗಳೂರು: ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಎಸಿಬಿಗೆ ದೂರು ನೀಡಿದ್ದಾರೆ.
ಅಕ್ರಮ ಡಿನೋಟಿಫಿಕೇಶನ್ ಆರೋಪ: ಸಿಎಂ ಸೇರಿ ಮೂವರ ವಿರುದ್ಧ ಎಸಿಬಿಗೆ ದೂರು
ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಎಸಿಬಿಗೆ ದೂರು ನೀಡಿದ್ದಾರೆ.
1993ರಲ್ಲಿ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ 84 ಎಕರೆ ನೋಟಿಫೈ ಆಗಿತ್ತು. ಇದಕ್ಕೆ ಪೂರಕವಾಗಿ 1996ರಲ್ಲಿ ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿತ್ತು. ಇದಾದ 13 ವರ್ಷಗಳ ಬಳಿಕ ಅಂದರೆ 2009ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅತ್ತಿಬೆಲೆಯ ಹೋಬಳಿಯ ಕಿತ್ತಗಾನಹಳ್ಳಿಯಲ್ಲಿ 9 ಎಕರೆ 20 ಗುಂಟೆ ಡಿನೋಟಿಫಿಕೇಷನ್ ಮಾಡಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಬಿಎಸ್ವೈ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ವಿ.ಪಿ.ಬಳಿಗಾರ್ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ.