ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿದ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.