ಕರ್ನಾಟಕ

karnataka

ETV Bharat / state

ಕಂದಾಯ ಇಲಾಖೆ ದಾಖಲೆ ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌.. ಸಚಿವ ಗೋವಿಂದ ಕಾರಜೋಳ - revenue department records

ಕಂದಾಯ ಇಲಾಖೆ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರೂ ಕೂಡ ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

criminal-case-against-officials-who-tampered-revenue-department-records
ಕಂದಾಯ ಇಲಾಖೆ ದಾಖಲೆ ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌ : ಸಚಿವ ಗೋವಿಂದ ಕಾರಜೋಳ

By

Published : Sep 21, 2022, 5:39 PM IST

ಬೆಂಗಳೂರು:ಕಂದಾಯ ಇಲಾಖೆ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರೂ ಕೂಡ ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಷಯ ಪ್ರಸ್ತಾಪಿಸಿ, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ ಭಾಗ್ಯ ಜಲ ನಿಗಮ ಯೋಜನೆಗೆ ತೆಗದೆದುಕೊಂಡು ಪರಿಹಾರವನ್ನು ಕೂಡ ನೀಡಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಹಾಗೂ ಅವರ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿಗಳಾದ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ ಎಂದು ತಿಳಿಸಿದರು.

ಕ್ರಮಕ್ಕೆ ಆಗ್ರಹ:ಕೃಷ್ಣ ಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್‌ ಬಸಮ್ಮನವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‌ಗೆ ಯಾವುದೇ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ರೆ, ಉಪ ಆಯುಕ್ತರು ಬದಲಾವಣೆ ಮಾಡಬೇಕು. ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಆದರೆ, ತಹಶೀಲ್ದಾರ್​ರನ್ನು ಅಮಾನತು ಮಾಡಿಲ್ಲ. ತಕ್ಷಣ ತಹಶೀಲ್ದಾರ್‌ರನ್ನು ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಸಸ್ಪೆಂಡ್​ಗೆ ಸೂಚಿಸುತ್ತೇವೆ:ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಗೋವಿಂದ ಕಾರಜೋಳ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಈಗ ಗೊತ್ತಾಗಿದೆ. ಭೂಸ್ವಾಧೀನವನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‌ ಅವರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನು ಸಸ್ಪೆಂಡ್ ಮಾಡಲು ಸರ್ಕಾರದಿಂದ ಸೂಚಿಸುತ್ತೇವೆ. ಹಣ ರಿಕವರಿ ಮಾಡಲು ಜಿಲ್ಲಾಧಿಕಾರಿಗೆ ಹೇಳುತ್ತೇನೆ. ಕ್ರಿಮಿನಲ್ ಪ್ರಕರಣ ಹಾಕೋಣ, ತಕ್ಷಣ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ಕೊಡುತ್ತೇನೆ ಎಂದು ತಿಳಿಸಿದರು.

ಇಲಾಖೆ ಹೆಸರು ಬದಲಾವಣೆ:ಇನ್ನು, ಬೆಳಗಾವಿ ಜಿಲ್ಲೆಯ ಕೆಲ ತಾಲೂಕಿನಲ್ಲಿ ರೈತರ ಪಹಣಿಯಲ್ಲಿ ಮಾಲೀಕರ ಹೆಸರ ಬದಲಿಗೆ ಕರ್ನಾಟಕ ನೀರಾವರಿ ನಿಗಮ ಎಂದು ಹೆಸರಿದ್ದು, ರೈತರು ಕಂಗಾಲಾಗಿದ್ದಾರೆ ಎಂದು ಕೌಜಲಗಿ ಮಹಾಂತೇಶ್‌ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಗೋವಿಂದ ಕಾರಜೋಳ ಅವರು, ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ 3,26,000 ಎಕರೆ ಭೂಸ್ವಾಧೀನ ಆಗಿದೆ. ಭೂಸ್ವಾಧೀನ ಆದ್ಮೇಲೆ ನೀರಾವರಿ ಇಲಾಖೆ ಅಂತ ಹೆಸರು ಬದಲಾವಣೆ ಆಗಬೇಕಿತ್ತು. ಅದು ಆಗದೇ ಇರುವುದರಿಂದ 25,000 ಎಕರೆ ಹೊರತುಪಡಿಸಿ 3 ಲಕ್ಷ ಎಕರೆಯಷ್ಟು ರೈತರ ಹೆಸರಿನಲ್ಲಿ ಉಳಿದುಬಿಟ್ಟಿತ್ತು. ಅವರು ಪರಿಹಾರವನ್ನು ತೆಗೆದುಕೊಂಡಿದ್ದರು. ಈಗ 3,26,000 ಎಕರೆಯನ್ನು ದಾಖಲೆ ತಿದ್ದುಪಡಿ ಮಾಡಿ ಕರ್ನಾಟಕ ಸರ್ಕಾರ ನೀರಾವರಿ ನಿಗಮ ಹೆಸರನ್ನು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಇದು ಕೇವಲ ನಾವಷ್ಟೇ ಮಾಡಿಲ್ಲ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲೂ ಕೂಡ ಪ್ರಕರಣಗಳಾಗಿ, 3,25,000 ಎಕರೆ ಸರ್ಕಾರದ ಹೆಸರಿಗೆ ಮಾಡಿಕೊಂಡಿದ್ದೇವೆ. ರೈತರು ಅವರ ಹೆಸರಿನಲ್ಲೇ ಇದ್ದಿದ್ದರಿಂದ ಕೆಲವರು ಮಾರಾಟ ಮಾಡಿದ್ದಾರೆ. ಕೆಲವರು ಸಾಲ ತೆಗೆದಿದ್ದಾರೆ. ಕೆಲವರು ಭಾಗ ಮಾಡಿಕೊಂಡಿದ್ದಾರೆ. ಹೀಗಾಗಿ ಅನೇಕ ಸಮಸ್ಯೆಗಳಾಗಿದ್ದವು. ತಾಂತ್ರಿಕ ದೋಷಗಳನ್ನು ಸರಿಪಡಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು sಚಿವರು ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ನಡುವೆ ಮತಾಂತರ ನಿಷೇಧ ಕಾಯ್ದೆಗೆ ವಿಧಾನಸಭೆ ಅಂಗೀಕಾರ

ABOUT THE AUTHOR

...view details