ಕರ್ನಾಟಕ

karnataka

ETV Bharat / state

ಅನಧಿಕೃತ ಧಾರ್ಮಿಕ ಕೇಂದ್ರಗಳ ವರದಿ ಸಲ್ಲಿಸದಿದ್ದರೆ ಕ್ರಮ : ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಎಚ್ಚರಿಕೆ

ಅನಧಿಕೃತ ಧಾರ್ಮಿಕ ಕೇಂದ್ರಗಳ ಸರ್ವೆ ವರದಿ ಸಲ್ಲಿಸಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

action-if-the-report-of-unauthorized-religious-centers-is-not-submitted-high-court
ಅನಧಿಕೃತ ಧಾರ್ಮಿಕ ಕೇಂದ್ರಗಳ ವರದಿ

By

Published : Mar 30, 2021, 2:09 AM IST

ಬೆಂಗಳೂರು :ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ಸರ್ವೆ ವರದಿ ಸಲ್ಲಿಸಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಹೈಕೋರ್ಟ್, ಕೂಡಲೇ ಅನಧಿಕೃತ ಧಾರ್ಮಿಕ ಕೇಂದ್ರಗಳ ಸರ್ವೆ ವರದಿ ಹಾಗೂ ಅವುಗಳನ್ನು ತೆರವು ಮಾಡುವ ಕ್ರಿಯಾ ಯೋಜನೆ ಸಲ್ಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.

ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ :ನಾದಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣ.. ಜಾಮೀನು ಅರ್ಜಿ ವಜಾ ಹಿನ್ನೆಲೆ ಕೋರ್ಟ್‌ಗೆ ಶರಣಾದ ಆರೋಪಿ

ಈ ವೇಳೆ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ನಡೆಸಿರುವ ಸರ್ವೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಸರ್ಕಾರ ಹಾಗೂ ಪಾಲಿಕೆ ಪರ ವಕೀಲರು ಮನವಿ ಮಾಡಿದರೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ವರದಿ ಸಲ್ಲಿಕೆಗೆ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿತು. ಇನ್ನೊಂದು ವಾರದಲ್ಲಿ ವರದಿ ನೀಡದಿದ್ದರೆ ಜಿಲ್ಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಮೌಖಿಕ ಎಚ್ಚರಿಕೆ ನೀಡಿ, ಏಪ್ರಿಲ್ 15ರೊಳಗೆ ವರದಿ ಸಲ್ಲಿಸಲು ಕೊನೆಯ ಅವಕಾಶ ನೀಡಿತು. ಹಾಗೆಯೇ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆಯನ್ನೂ ಸಿದ್ದಪಡಿಸಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ಏಪ್ರಿಲ್ 17ಕ್ಕೆ ವಿಚಾರಣೆ ಮುಂದೂಡಿತು.

ABOUT THE AUTHOR

...view details