ಬೆಂಗಳೂರು:ಹೊಸಕೋಟೆಯಲ್ಲಿ ನಾಮಪತ್ರ ವಾಪಸ್ ಪಡೆಯುವಂತೆ ಶರತ್ ಬಚ್ಚೇಗೌಡರಿಗೆ ಸೂಚನೆ ನೀಡಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯದೇ ಇದ್ದರೆ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಚುನಾವಣಾ ಉಸ್ತುವಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗಿದ್ದು, ಎಲ್ಲಾ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಹೊಸಕೋಟೆ ಹೊರತುಪಡಿಸಿ ಇತರ ಕಡೆ ಯಾವುದೇ ಸಮಸ್ಯೆ ಇಲ್ಲ ಎಂದರು.