ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಕ್ರಮ: ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತಿದ್ದಾರೆ.

Home Minister's meeting with police officers
ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ

By

Published : Aug 31, 2020, 1:13 PM IST

ಬೆಂಗಳೂರು:ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.

ವಿಧಾನಸೌಧದಲ್ಲಿ ಸಭೆ ಆರಂಭವಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಆಂತರಿಕ ಭದ್ರತಾ ವಿಭಾಗದ ಮುಖ್ಯಸ್ಥ ಭಾಸ್ಕರ್ ರಾವ್ ಸೇರಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಇಡೀ ರಾಜ್ಯದಲ್ಲಿ ಯಾವ ರೀತಿ ಡ್ರಗ್ಸ್ ನಿಯಂತ್ರಣ ಮಾಡಬೇಕೆಂಬುದರ ಬಗ್ಗೆ ಗೃಹ ಸಚಿವರು, ಪೊಲೀಸ್ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ಕಿರುತೆರೆ ನಟಿ ಸೇರಿದಂತೆ ದೊಡ್ಡ ಜಾಲವೇ ಸಿಕ್ಕಿಬಿದ್ದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಡ್ರಗ್ಸ್ ದಂಧೆಯನ್ನು ನಿರ್ಮೂಲನೆ ಮಾಡುವ ಸಂಬಂಧ ಕ್ರಮ ಕೈಗೊಳ್ಳುತ್ತಿದೆ.

ABOUT THE AUTHOR

...view details