ಬೆಂಗಳೂರು: ಉನ್ನತ ಮಟ್ಟದ ಸಮಿತಿಯ ವರದಿ ಬಂದ ಬಳಿಕ ಕೆಎಸ್ಆರ್ಟಿಸಿ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ ನಿಗಮಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಕ್ರಮ: ಸವದಿ
ಉನ್ನತ ಮಟ್ಟದ ಸಮಿತಿಯ ವರದಿ ಬಂದ ಬಳಿಕ ಕೆಎಸ್ಆರ್ಟಿಸಿ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ವಿಧಾನಸಭೆ ಕಲಾಪದ ಪ್ರಶ್ನೋತ್ತರ ಅವಧಿ ವೇಳೆ ಹರತಾಳು ಹಾಲಪ್ಪರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಉನ್ನತಮಟ್ಟದ ಸಮಿತಿ ತುರ್ತು ವರದಿ ನೀಡಿದೆ. ವಿಸ್ತೃತ ವರದಿಯನ್ನು ನೀಡಲಿದ್ದು, ವಿಸ್ತೃತ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಉನ್ನತ ಅಧಿಕಾರಿಗಳ ಸಮಿತಿ ಸರ್ಕಾರಿ ನೌಕರರನ್ನಾಗಿ ಮಾಡಿದರೆ ಆಗುವ ಲಾಭ, ನಷ್ಟ ಏನು? ಸಾಧಕ ಬಾಧಕಗಳ ಅಧ್ಯಯನ ನಡೆಸಿ ವರದಿ ನೀಡಲಿದೆ. ಈಗಾಗಲೇ ಆಂಧ್ರದಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲಾಗಿದೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರನ್ನಾಗಿ ಮಾಡಲು ಬೇಡಿಕೆ ಇದೆ ಎಂದು ಇದೇ ವೇಳೆ ವಿವರಿಸಿದರು.