ಬೆಂಗಳೂರು:ಖಾಸಗಿ ಆ್ಯಂಬುಲೆನ್ಸ್ ಸೇವೆಗೆ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಸೇವೆಗೆ ನೀತಿಯೊಂದನ್ನು ಜಾರಿಗೆ ತರುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಆ್ಯಂಬುಲೆನ್ಸ್ ಸೇವೆಗೆ ನೀತಿ ರೂಪಿಸಲಾಗುವುದು: ಶ್ರೀರಾಮುಲು ಭರವಸೆ - ambulance service
ಖಾಸಗಿ ಆ್ಯಂಬುಲೆನ್ಸ್ ಗಳು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.
ಆ್ಯಂಬುಲೆನ್ಸ್ ಸೇವೆಗೆ ನೀತಿ ರೂಪಿಸಲಾಗುವುದು: ಶ್ರೀರಾಮುಲು ಭರವಸೆ
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆ್ಯಂಬುಲೆನ್ಸ್ಗಳು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ನೀತಿ ರೂಪಿಸಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗಳು ಹೆಚ್ಚು ಹಣ ವಸೂಲಿ ಮಾಡುವುದನ್ನು ತಪ್ಪಿಸಲು ಸರ್ಕಾರ ಮಧ್ಯ ಪ್ರವೇಶ ಮಾಡಿ ಅದಕ್ಕೆ ನಿಯಮ ತಂದಿತ್ತು. ಈಗ ಆ್ಯಂಬುಲೆನ್ಸ್ಗೂ ದರ ನಿಗದಿಪಡಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ನೀತಿಯೊಂದನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.