ಬೆಂಗಳೂರು: ಕೊರೊನಾ ವೈರಸ್ ರಾಜ್ಯದಲ್ಲಿ ಹರಡದಂತೆ ಕ್ರಮ ವಹಿಸಲಾಗುತ್ತದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಈಗಾಗಲೇ ಕರ್ನಾಟಕದಲ್ಲಿ 63 ಕೊರೊನಾ ವೈರಸ್ ಬಾಧಿತ ಶಂಕಿತ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 58 ಜನರಿಗೆ ಮನೆಯಲ್ಲೇ ವೈದ್ಯಕೀಯ ನಿಗಾ ವಹಿಸಲಾಗಿದೆ. ಒಬ್ಬ ಶಂಕಿತ ರೋಗಿಯನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲಾಗಿದೆ. ಇಲ್ಲಿಯತನಕ 56 ಶಂಕಿತ ರೋಗಿಗಳ ಸ್ಯಾಂಪಲ್‌ಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 39 ಶಂಕಿತ ರೋಗಿಗಳ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವರು, ಚೀನಾದಿಂದ ಬಂದ ಪ್ರವಾಸಿಗರ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ. ಆ ದೇಶಕ್ಕೆ ಭೇಟಿ ನೀಡಿ ಬಂದವರ ವಿಳಾಸ ಪತ್ತೆ ಮಾಡಿ ಅವರ ತಪಾಸಣೆಯನ್ನೂ ಮಾಡುತ್ತಿದ್ದೇವೆ. ರೋಗದ ಶಂಕೆ ಕಂಡು ಬಂದವರನ್ನು ರಾಜೀವ್ ಗಾಂಧಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ಏರ್ಪಾಡು ಮಾಡಲಾಗಿದೆ ಎಂದರು.
ರೋಗಿಗಳು ಅಲ್ಲಿ ಹೆಚ್ಚು ದಿನ ಇರಬೇಕಾದ ಕಾರಣ, ಅಗತ್ಯ ಸೌಕರ್ಯ ಹೆಚ್ಚಿಸಲು ಸೂಚಿಸಿದ್ದೇನೆ. ರೋಗ ಹರಡದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಡಾ.ಅಶ್ವತ್ಥ ನಾರಾಯಣ ಭರವಸೆ ಕೊಟ್ಟರು.