ಬೆಂಗಳೂರು :ನಟ ಪ್ರೇಮ್ ವೈದ್ಯರಾಗಿ ಅಭಿನಯಿಸಿರುವ ಪ್ರೇಮಂ ಪೂಜ್ಯಂ ಸಿನಿಮಾ ಜನಪರ ಕಳಕಳಿ ಹೊಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ವಿಕಾಸಸೌಧದ ಕಚೇರಿಯಲ್ಲಿ ಇಂದು ನಟ ಪ್ರೇಮ್ ಸಚಿವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಪ್ರೇಮ್ ನಮ್ಮೆಲ್ಲರ ಲವ್ಲಿ ಸ್ಟಾರ್ ಆಗಿದ್ದಾರೆ. ಪ್ರೇಮಂ ಪೂಜ್ಯಂ ಸಿನಿಮಾದಲ್ಲಿ ಜನರ ಸಂಕಷ್ಟಕ್ಕೆ ಮಿಡಿಯುವ ವೈದ್ಯರಾಗಿ, ಕೋವಿಡ್ ವಾರಿಯರ್ ಆಗಿ ನಟ ಪ್ರೇಮ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿನ ವೈದ್ಯೋ ನಾರಾಯಣೋ ಹರಿ ಎಂಬ ಹಾಡು ಚೆನ್ನಾಗಿದ್ದು, ಸರ್ಕಾರದ ಪರವಾಗಿ ಮತ್ತು ವೈಯಕ್ತಿಕವಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.