ಬೆಂಗಳೂರು: ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಕಾರಣ ಸ್ಯಾಂಡಲ್ವುಡ್ ನಟ ಪುನಿತ್ ರಾಜ್ಕುಮಾರ್(46) ವಿಧಿವಶರಾಗಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಪುನೀತ್ ರಾಜ್ಕುಮಾರ್ ನಿಧನ.. ರಾಷ್ಟ್ರಧ್ವಜ ಹೊದಿಸಿ ಸಿಎಂ ಬೊಮ್ಮಾಯಿ ಗೌರವ - ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ
ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಇಡೀ ಕರ್ನಾಟಕವೇ ಕಂಬನಿ ಮಿಡಿದಿದ್ದು, ಅವರ ಅಂತಿಮ ದರ್ಶನ ಪಡೆದುಕೊಳ್ಳಲು ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ.
ಭಾನುವಾರ ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ನಾಳೆ ಇಡೀ ದಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದರ ಮಧ್ಯೆ ಕಂಠೀರವ ಸ್ಟೇಡಿಯಂಗೆ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಟ ಪುನೀತ್ ಪಾರ್ಥಿವ ಶರೀರಕ್ಕೆ ಸರ್ಕಾರದ ವತಿಯಿಂದ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ, ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿ ಸಿಎಂ ಗೌರವ ಸಲ್ಲಿಸಿದರು.
ಈ ವೇಳೆ ಸಚಿವರಾದ ಭೈರತಿ ಬಸವರಾಜ್, ಎಂಟಿಬಿ ನಾಗರಾಜ್, ಡಾ.ಅಶ್ವತ್ಥ ನಾರಾಯಣ, ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್, ವಿ.ಸುನಿಲ್ ಕುಮಾರ್, ನಾರಾಯಣಗೌಡ ಸೇರಿದಂತೆ ಹಲವರು ಸಹ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.