ಬೆಂಗಳೂರು: ಇಂದು ಸಂಜೆ ವಿಧಾನಸೌಧದ ಮುಂಭಾಗ ನಡೆಯುವ ಭವ್ಯ ಕಾರ್ಯಕ್ರಮದಲ್ಲಿ ದಿ.ಪುನೀತ್ ರಾಜ್‍ಕುಮಾರ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗಣ್ಯರ ಸಮ್ಮುಖದಲ್ಲಿ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗು ಪುನೀತ್ ಅವರ ಆತ್ಮೀಯ ಗೆಳೆಯ ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಪಾಲ್ಗೊಂಡು ಗಮನ ಸೆಳೆಯಲಿದ್ದಾರೆ.
ನಿನ್ನೆಯಷ್ಟೇ ಜೂ.ಎನ್ಟಿಆರ್ ಬೆಂಗಳೂರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ಸಚಿವ ಮುನಿರತ್ನ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವ ಡಾ ಕೆ ಸುಧಾಕರ್ ಇದ್ದರು. ಮತ್ತೊಂದೆಡೆ ಅಭಿಮಾನಿಗಳು ನೆಚ್ಚಿನ ನಟನ ನೋಡಲು ಮುಗಿಬಿದ್ದರು. ರಜನಿಕಾಂತ್ ನೇರವಾಗಿ ಖಾಸಗಿ ಹೊಟೇಲ್ಗೆ ತೆರಳಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 4 ಗಂಟೆಗೆ ಆರಂಭವಾಗಲಿದೆ.
ಇದನ್ನೂ ಓದಿ:ಶಾಲಾ ಪಠ್ಯದಲ್ಲಿ ಪುನೀತ್ ವಿಷಯ ಸೇರ್ಪಡೆಗೆ ಹಂತ ಹಂತವಾಗಿ ಕ್ರಮ: ಸಿಎಂ ಬೊಮ್ಮಾಯಿ