ಕನ್ನಡ ಚಿತ್ರರಂಗ ಅಲ್ಲದೇ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟ ಸುದೀಪ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿನಿಮಾ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿರುವ ಸುದೀಪ್ ಅವರನ್ನು ಇದೀಗ ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನೇಮಿಸಲಾಗಿದೆ.
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಸರ್ಕಾರದೊಂದಿಗೆ ಕೈಜೋಡಿಸುವ ಸಲುವಾಗಿ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಸುದೀಪ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಸುದೀಪ್ ಇದನ್ನೂ ಓದಿ:ಕಿಚ್ಚ ಸುದೀಪ್‌ಗಿಂದು 49ನೇ ಹುಟ್ಟುಹಬ್ಬದ ಸಂಭ್ರಮ: ಒಡಿಶಾ ಕಡಲ ತೀರದಲ್ಲಿ ಮರಳು ಶಿಲ್ಪ ಗೌರವ
ಯಾವುದೇ ಸಂಭಾವನೆ ಪಡೆಯದ ಸುದೀಪ್: ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಇದಕ್ಕೆ ಸುದೀಪ್ ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕೆ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.