ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ದುರ್ಘಟನೆ ಬಗ್ಗೆ ಸ್ಯಾಂಡಲ್ವುಡ್ ನಟ ಸುದೀಪ್ ಟ್ವೀಟ್ ಮಾಡಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ದುರಂತಕ್ಕೆ ಸಂತಾಪ ಸೂಚಿಸಿದ ನಟ ಸುದೀಪ್ - ಸಂತಾಪ ಸೂಚಿಸಿದ ನಟ ಸುದೀಪ್
ನಿನ್ನೆ ರಾತ್ರಿ ಶಿವಮೊಗ್ಗ ಸಮೀಪದಲ್ಲಿ ಜಿಲೆಟಿನ್ ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ನಟ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಸುದೀಪ್
ನಿನ್ನೆ ತಡರಾತ್ರಿ ಶಿವಮೊಗ್ಗ ಸಮೀಪದ ಹುಣಸೋಡು ಬಳಿಯ ಕ್ರಷರ್ನಲ್ಲಿ ಜಿಲೆಟಿನ್ ಸ್ಫೊಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂಲತಃ ಶಿವಮೊಗ್ಗ ಜಿಲ್ಲೆಯವರೇ ಆಗಿರುವ ನಟ ಸುದೀಪ್ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವು ಅಮೂಲ್ಯ. ಸರ್ಕಾರ ಅಗತ್ಯ ಕ್ರಮ ತಗೆದುಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
Last Updated : Jan 22, 2021, 1:31 PM IST