ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಕಳೆದ ವರ್ಷ ಸೂಪರ್ ಹಿಟ್ ಆದ ಚಿತ್ರಗಳಲ್ಲಿ ಪೊನ್ನಿಯಿನ್ ಸೆಲ್ವನ್ ಚಿತ್ರ ಕೂಡ ಒಂದು. ಚಿಯಾ ವಿಕ್ರಮ್, ಜಯಂ ರವಿ, ಕಾರ್ತಿ, ಐಶ್ವರ್ಯಾ ರೈ ಬಚ್ಚನ್, ತ್ರಿಷಾ, ಶೋಭಿತಾ, ಪ್ರಕಾಶ್ ರಾಜ್ ಅಭಿನಯದ ಮಣಿರತ್ನಂ ನಿರ್ದೇಶನದ ಈ ಚಿತ್ರ ದೇಶದ್ಯಾಂತ ಬಿಡುಡಗೆ ಆಗಿ 500 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿತ್ತು. ಇದೀಗ ಈ ಚಿತ್ರದ ಮುಂದುವರೆದ ಭಾಗವಾಗಿ ಪೊನ್ನಿಯಿನ್ ಸೆಲ್ವನ್ 2 ಸಿನಿಮಾ ರೆಡಿಯಾಗಿ ಬಿಡುಗಡೆಗೆ ಸಜ್ಜಾಗಿದೆ.
ನಿರ್ದೇಶಕ ಮಣಿರತ್ನಂ ಪೊನ್ನಿಯಿನ್ ಸೆಲ್ವನ್ 2 ಚಿತ್ರವನ್ನ ಸೈಲೆಂಟ್ ಆಗಿ ಚಿತ್ರೀಕರಣ ಮಾಡಿ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾರೆ. ಈಗಾಗಲೇ ಟ್ರೈಲರ್ ಹಾಗೂ ಹಾಡುಗಳನ್ನ ಬಿಡುಗಡೆ ಮಾಡಿದ್ದು, ಸಿನಿ ಪ್ರೀಯರಲ್ಲಿ ಕುತೂಹಲ ಮೂಡಿಸಿದೆ. ಈ ಹಿನ್ನಲೆಯಲ್ಲಿ ನಟ ವಿಕ್ರಮ್, ಜಯಂ ರವಿ, ಕಾರ್ತಿ, ತ್ರಿಷಾ, ಶೋಭಿತಾ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ದೆಹಲಿ, ಮುಂಬೈ, ಹೈದಾರಬಾದ್ ನಲ್ಲಿ ಭರ್ಜರಿ ಪ್ರಚಾರ ಮಾಡಿ ಈಗ ಬೆಂಗಳೂರಿಗೆ ಆಗಮಿಸಿದ್ದಾರೆ. ಪೊನ್ನಿಯಿನ್ ಸೆಲ್ವನ್ 2 ಚಿತ್ರತಂಡದ ನಾಯಕರಾದ ವಿಕ್ರಮ್, ಜಯಂ ರವಿ, ಕಾರ್ತಿ, ತ್ರಿಷಾ, ಶೋಭಿತಾ ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ. ಈ ವಿಕೇಂಡ್ ಮೂಡ್ ನಲ್ಲಿರೋ ಬೆಂಗಳೂರಿನಲ್ಲಿ ಈ ಪೊನ್ನಿಯಿನ್ ಸೆಲ್ವನ್ 2 ಚಿತ್ರದ ಮಾಧ್ಯಗೋಷ್ಠಿ ನಡೆಸಲಿದೆ.