ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ಕುಮಾರ್ ತಮ್ಮ ಬಗೆಗಿನ ಅವಹೇಳನಕಾರಿ ಪೋಸ್ಟ್ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ನೀಡಿದರು.
ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಠಾಣೆಗೆ ವಿನೋದ್ ರಾಜ್ ಭೇಟಿ - Actor Vinod Raj visited cybercrime station at benglure
ಕಳೆದ 8 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಟ ವಿನೋದ್ ರಾಜ್ ಬಗ್ಗೆ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸ್ ತನಿಖೆ ಮುಂದುವರೆದಿದೆ. ಈ ವಿಚಾರವಾಗಿ ಸೈಬರ್ ಕ್ರೈಂ ಠಾಣೆಗೆ ನಟ ಭೇಟಿ ನೀಡಿ, ಮಾಹಿತಿ ನೀಡಿದ್ದಾರೆ.
ಕಳೆದ 8 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಟ ವಿನೋದ್ ರಾಜ್ ಬಗ್ಗೆ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಈ ಕುರಿತು ವಿನೋದ್ ರಾಜ್ಕುಮಾರ್ ಉತ್ತರ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ತನಿಖೆ ಮುಂದುವರೆಸಿದ್ದು, ತನಿಖೆಯ ವಿಚಾರವಾಗಿ ಠಾಣೆಗೆ ನಟ ಭೇಟಿ ನೀಡಿ, ಮಾಹಿತಿ ನೀಡಿದರು.
ಈ ಕುರಿತು ಮಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ನನ್ನನ್ನು ಠಾಣೆಗೆ ಬರುವಂತೆ ಸೂಚಿಸಿದ್ದರು. ಯುವಕರು ಕೆಟ್ಟ ಮನಸ್ಥಿತಿಯಿಂದ ಹೊರಬರಬೇಕು. ಈ ರೀತಿಯ ಕೃತ್ಯಗಳನ್ನು ಎಸಗಬಾರದು ಎಂದರು.