ಬೆಂಗಳೂರು:ವಂಚಕ ಯುವರಾಜನ ಖಾತೆಯಿಂದ ಹಣ ವರ್ಗಾವಣೆ ವಿಚಾರವಾಗಿ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆ ಮುಕ್ತಾಯವಾಗಿದೆ.
ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ ಎಂದ ನಟಿ ರಾಧಿಕಾ ಇಂದು ಸತತ ನಾಲ್ಕು ಗಂಟೆಗಳ ಕಾಲ ಹಿರಿಯ ಪೊಲೀಸ್ ಅಧಿಕಾರಿಗಳು ರಾಧಿಕಾ ಅವರಿಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ವಿಚಾರಣೆ ಮುಗಿಸಿ ಹೊರ ಬಂದಿರುವ ರಾಧಿಕಾ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿದ್ದಾರೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟಿದ್ದೀನಿ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ. ತನಿಖೆಗೆ ನಾನು ಸಹಕರಿಸುತ್ತೇನೆ. ಎಲ್ಲಾ ದಾಖಲೆಗಳನ್ನ ಸಿಸಿಬಿ ಅಧಿಕಾರಿಗಳಿಗೆ ಒದಗಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಣ ವರ್ಗಾವಣೆ ಆರೋಪ: ಸಿಸಿಬಿ ವಿಚಾರಣೆಗೆ ನಟಿ ರಾಧಿಕಾ ಹಾಜರು