ಬೆಂಗಳೂರು: ಡ್ರಗ್ ಪ್ರಕರಣ ಆರೋಪದಡಿ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ನಟಿ ರಾಗಿಣಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ರಾಗಿಣಿಗೆ ಆರೋಗ್ಯ ಸಮಸ್ಯೆ ಉಲ್ಬಣವಾದ ಕಾರಣ ಜೈಲು ಅಧಿಕಾರಿಗಳು ರಾಗಿಣಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ನಟಿ ರಾಗಿಣಿಗೆ ಆರೋಗ್ಯ ಸಮಸ್ಯೆ...ಜೈಲಿನಿಂದ ಖಾಸಗಿ ಆಸ್ಪತ್ರೆಗೆ ದಾಖಲು - Actress Ragini health issue
ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ನಟಿ ರಾಗಿಣಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಡ್ರಗ್ಸ್ ಪ್ರಕರಣ ಆರೋಪ ಎದುರಿಸುತ್ತಿರುವ ರಾಗಿಣಿ ಉಸಿರಾಟ ತೊಂದರೆ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ...ಮೌಲ್ವಿ ವಿರುದ್ದ ದೂರು ದಾಖಲಿಸಿದ ವಕೀಲ..!
ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ನಿನ್ನೆ ಜೈಲಿನ ಅಧಿಕಾರಿಗಳ ಬಳಿ ತನಗೆ ಮತ್ತಷ್ಟು ಆರೋಗ್ಯ ಉಲ್ಬಣವಾಗುತ್ತಿದೆ ಎಂದು ಹೇಳಿದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರಾಗಿಣಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿರಲಿಲ್ಲ. ಆದರೆ ಸಂಜನಾಗೆ ಅನಾರೋಗ್ಯದ ಕಾರಣದಿಂದ ಜಾಮೀನು ಸಿಕ್ಕಿತ್ತು. ನಿನ್ನೆ ಪೋಷಕರ ಜೊತೆ ಅಳಲು ತೋಡಿಕೊಂಡಿದ್ದ ರಾಗಿಣಿ, ನನಗೆ ಜೈಲಿನಲ್ಲಿ ಇರಲು ಸಾಧ್ಯವಿಲ್ಲ ಬಹಳ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಸದ್ಯ ಜೈಲು ಅಧಿಕಾರಿಗಳ ಅನುಮತಿ ಮೇರೆಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಆಸ್ಪತ್ರೆಗೆ ಶಿಫ್ಚ್ ಮಾಡಲಾಗಿದೆ.