ಬೆಂಗಳೂರು: ಲಾಕ್ಡೌನ್ನಿಂದ ಕೆಲಸವಿಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದ ಕೂಲಿ ಕಾರ್ಮಿಕರಿಗೆ ಬೆಂಗಳೂರು ಹೊರವಲಯದ ಹೆಬ್ಬಗೋಡಿಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಅಂಬರೀಶ್ ಆಯೋಜಿಸಿದ್ದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ನಟಿ ರಾಗಿಣಿ ಹಾಗೂ ನಟ ಜಯರಾಮ್ ಕಾರ್ತಿಕ್ (ಜೆಕೆ) ಭಾಗವಹಿಸಿದ್ದರು.
ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿರುವ 1 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ಗಳನ್ನು ವಿತರಣೆ ಮಾಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಟಿ ರಾಗಿಣಿ, ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಹಲವರು ಬಡ ಹಾಗೂ ಕೂಲಿ ಕಾರ್ಮಿಕರ ನೆರವಿಗೆ ಬಂದಿದ್ದಾರೆ. ಅದರಲ್ಲಿ ಕರವೇ ಅಂಬರೀಶ್ ನೇತೃತ್ವದ ತಂಡ ಲಾಕ್ಡೌನ್ ಆದ ದಿನದಿಂದಲೂ ಆಹಾರ ಪ್ಯಾಕೇಟ್ ಹಾಗೂ ದಿನಸಿ ಕಿಟ್ಗಳನ್ನು ವಿತರಿಸುತ್ತಿದ್ದಾರೆ ಎಂದರು.