ಕರ್ನಾಟಕ

karnataka

ETV Bharat / state

ಸ್ಯಾಂಡಲ್​​ವುಡ್​​ ಡ್ರಗ್ಸ್ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ರಾಗಿಣಿ - ಜಾಮೀನು

ನಟಿ ರಾಗಿಣಿ ಎನ್​ಡಿಪಿಎಸ್​ ವಿಶೇಷ ಕೋರ್ಟ್ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.

Ragini
ರಾಗಿಣಿ

By

Published : Oct 15, 2020, 8:18 PM IST

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಸೆ.28ರಂದು ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಗಿಣಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಕಾಟನ್ ಪೇಟೆ ಠಾಣೆ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ತಾವು ಡ್ರಗ್ಸ್ ಸೇವಿಸಿಲ್ಲ. ಪೂರೈಕೆ ಅಥವಾ ಮಾರಾಟವೂ ಮಾಡಿಲ್ಲ. ಪೊಲೀಸರು ಮಾಡಿರುವ ಆರೋಪಗಳಿಗೆ ಸಾಕ್ಷ್ಯಧಾರ ಹಾಗೂ ದಾಖಲೆ ಇಲ್ಲ. ರವಿಶಂಕರ್ ಹೇಳಿಕೆ ಅಷ್ಟೇ ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಪಾಸಣೆ ವೇಳೆ ತಮ್ಮ ಮನೆಯಲ್ಲಿ ಯಾವುದೇ ಮಾದಕ ಪದಾರ್ಥಗಳು ಸಿಕ್ಕಿಲ್ಲ. ವಶಪಡಿಸಿಕೊಳ್ಳಲಾದ ವಸ್ತುಗಳಿಂದ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರುವ ಅಥವಾ ಡ್ರಗ್ಸ್ ಸೇವಿಸಿದ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ .ಆದರೂ ತಮ್ಮನ್ನು ಪೊಲೀಸರು ಬಂಧಿಸಿದ್ದು, ಅದು ಕಾನೂನು ಬಾಹಿರ ಕ್ರಮವಾಗಿದೆ ಎಂದು ರಾಗಿಣಿ ದೂರಿದ್ದಾರೆ.

ಅಲ್ಲದೆ, ಪೊಲೀಸ್ ವಶದಲ್ಲಿದ್ದ ಅವಧಿಯಲ್ಲಿ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಈಗಾಗಲೇ ಸಾಕಷ್ಟು ತನಿಖೆ ನಡೆಸಲಾಗಿದೆ. ಪೊಲೀಸ್ ವಿಚಾರಣೆ ಪೂರ್ಣಗೊಂಡಿದ್ದರೂ ತಮಗೆ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಚಾರಣಾ ನ್ಯಾಯಾಲಯ ಕ್ರಮ ಸರಿಯಲ್ಲ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ರಾಗಿಣಿ ಕೋರಿದ್ದಾರೆ.

ABOUT THE AUTHOR

...view details