ಕರ್ನಾಟಕ

karnataka

ETV Bharat / state

ನಟಿ ಶೃತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸ್ಥಾನ

'ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ' ಅಧ್ಯಕ್ಷರಾಗಿ ನಟಿ ಶೃತಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

Actress shruti
ನಟಿ ಶೃತಿ

By

Published : Jul 19, 2021, 3:46 PM IST

ಬೆಂಗಳೂರು:ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದ್ದ ನಟಿ ಶೃತಿ ಅವರನ್ನು 'ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ' ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ನಿನ್ನೆ (ಭಾನುವಾರ) ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶೃತಿ ನೇಮಕಾತಿಯನ್ನು ಹಿಂಪಡೆದು ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ಅಧ್ಯಕ್ಷ ಸ್ಥಾನ‌ ನೀಡಲಾಗಿತ್ತು. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು.

ಹಠಾತ್ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಿದ್ದ ಹಿನ್ನೆಲೆ ನಟಿ ಶೃತಿ ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ನಟಿ ಶೃತಿ ಅವರಿಗೆ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ನಟಿ ಶೃತಿಗೆ ಕೊಕ್

ABOUT THE AUTHOR

...view details