ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಪ್ಪು ನಗರ ವಾರ್ಡ್ ಮಾಜಿ ಕಾರ್ಪೋರೇಟರ್ ಆಯುಬ್ ಖಾನ್ ಮೇಲೆ ಸಂಬಂಧಿಕನೇ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಇಂದು ಸಂಜೆ 7.30 ರಿಂದ 7.45 ರ ವೇಳೆ ಆಯುಬ್ ಖಾನ್ ಮೇಲೆ ಸಿವಿಲ್ ವ್ಯಾಜ್ಯ ಹಿನ್ನೆಲೆ ಸಂಬಂಧಿಕನೊಬ್ಬ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಗಾಯಗೊಂಡಿರುವ ಬಿಬಿಎಂಪಿ ಮಾಜಿ ಸದಸ್ಯ ಆಯುಬ್ ಖಾನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮನೆಯವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ಪರಾರಿಯಾಗಿರುವ ಆರೋಪಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.