ಕರ್ನಾಟಕ

karnataka

ETV Bharat / state

ಬೆಂಗಳೂರಿನಿಂದ ಹೊರ ಹೋಗುವವರಿಗಾಗಿ ಹೆಚ್ಚುವರಿ 1600 ಬಸ್​; ಲಕ್ಷ್ಮಣ ಸವದಿ - Lockdown news

ಬೆಂಗಳೂರಿನಲ್ಲಿ ಒಂದು ವಾರ ಲಾಕ್​ಡೌನ್​ ಜಾರಿಗೊಳಿಸುತ್ತಿರುವ ಕಾರಣದಿಂದ ತುಂಬಾ ಜನ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ 1600 ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.

ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ

By

Published : Jul 13, 2020, 6:25 PM IST

ಬೆಂಗಳೂರು:ರಾಜ್ಯ ರಾಜಧಾನಿಯನ್ನು ಒಂದು ವಾರ ಲಾಕ್​​ಡೌನ್ ಮಾಡಲಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರ ಹೋಗಲು ಬಯಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ 1600 ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಮತ್ತು ನಾಳೆ ಎರಡು ದಿನ ಅಗತ್ಯಕ್ಕೆ ಅನುಗುಣವಾಗಿ ಬಸ್​​ಗಳ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.

ಹೊರ ಜಿಲ್ಲೆಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಇಂದು 800 ಮತ್ತು ನಾಳೆ 800 ಬಸ್​​​ಗಳನ್ನು ಹೆಚ್ಚುವರಿ ಸೇರ್ಪಡೆ ಮಾಡಿದ್ದೇವೆ. ಇನ್ನೂ 200 ಬಸ್​​ ಸಂಚಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನದವರೆಗೆ 500 ಬಸ್​ಗಳು ವಿವಿಧ ಜಿಲ್ಲೆಗಳಿಗೆ ತೆರಳಿದ್ದು, 15 ಸಾವಿರ ಜನ ಪ್ರಯಾಣ ಮಾಡಿದ್ದಾರೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಸಾರಿಗೆ ಸಂಸ್ಥೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತದೆ. ಲಾಕ್​​ಡೌನ್ ಘೋಷಣೆಯಾದರೂ ಯಾರೂ ಆತಂಕಕ್ಕೆ ಒಳಗಾಗಬಾರದು. ನಮ್ಮ ಸರ್ಕಾರ ಸಾರ್ವಜನಿಕರ ಹಿತರಕ್ಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ಸಹಕಾರ ನೀಡಬೇಕೆಂದು ಡಿಸಿಎಂ ಜನತೆಯಲ್ಲಿ ಮನವಿ ಮಾಡಿದ್ದಾರೆ.

ABOUT THE AUTHOR

...view details