ಬೆಂಗಳೂರು:ರಾಜ್ಯದಲ್ಲಿ ಈ ಬಾರಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಈಗಾಗಲೇ ಅನೇಕ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.
ಕಳೆದ ವಾರ ಪಿಎಫ್ಐ ಮುಖಂಡರ ಮೇಲೆ ಎನ್ಐಎ ದಾಳಿ ನಡೆಸಿತ್ತು. ಇಂದು ಬೆಳಗ್ಗೆ 3 ಗಂಟೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಈಗಾಗಲೇ ಸುಮಾರು 80 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ, ಕೋಮುಸೌಹಾರ್ದಕ್ಕೆ ಹಾನಿ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಈ ದಾಳಿ ನಡೆಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.