ಬೆಂಗಳೂರು :ಭೂಗತ ಪಾತಕಿ ರವಿ ಪೂಜಾರಿಯನ್ನ ಸೆನೆಗಲ್ ಜೈಲಿನಿಂದ ಕರೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆಯವರು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿರುವ ಅಮರ್ ಪಾಂಡೆಯವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನನ್ನು ಸಂಬಂಧ ಪಟ್ಟ ಆಸ್ಪತ್ರೆಗೆ ದಾಖಲಿಸಲಾಗಿತ್ತು.