ಬೆಂಗಳೂರು :ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಆದಿತ್ಯ ಆಳ್ವ, ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರದ ಡ್ರಗ್ಸ್ ಜಾಲದ ಆರೋಪಿ ಆದಿತ್ಯ ಆಳ್ವ - Sandalwood drug racket
ಅರ್ಜಿಯಲ್ಲಿ ಎಫ್ಐಆರ್ ದಾಖಲಿಸಿರುವ ಕಾಟನ್ಪೇಟೆ ಠಾಣೆ ಪೊಲೀಸರು, ಠಾಣೆಯ ಇನ್ಸ್ಸ್ಪೆಕ್ಟರ್ ಹಾಗೂ ಸಿಸಿಬಿ ಎಸಿಪಿ ಕೆ ಸಿ ಗೌತಮ್ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ..
ಹೈಕೋರ್ಟ್
ಪ್ರಸ್ತುತ ಪ್ರಕರಣದಲ್ಲಿ ಬಂಧನಕ್ಕೊಳಗಾಗುವ ಭಯದಲ್ಲಿ ತಲೆ ಮರೆಸಿಕೊಂಡಿರುವ ಆದಿತ್ಯ ಆಳ್ವ, ವಿಚಾರಣಾ ನ್ಯಾಯಾಲಯದ ಮುಂದೆ ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸದೇ ನೇರ ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.
ಅರ್ಜಿಯಲ್ಲಿ ಎಫ್ಐಆರ್ ದಾಖಲಿಸಿರುವ ಕಾಟನ್ಪೇಟೆ ಠಾಣೆ ಪೊಲೀಸರು, ಠಾಣೆಯ ಇನ್ಸ್ಸ್ಪೆಕ್ಟರ್ ಹಾಗೂ ಸಿಸಿಬಿ ಎಸಿಪಿ ಕೆ ಸಿ ಗೌತಮ್ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ. ಅರ್ಜಿ ಇದೇ ವಾರಂತ್ಯದೊಳಗೆ ನ್ಯಾಯಾಲಯದ ಎದುರು ವಿಚಾರಣೆಗೆ ಬರುವ ನಿರೀಕ್ಷೆ ಇದೆ.