ಬೆಂಗಳೂರು :2021-22ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ.
ಆದರ್ಶ ವಿದ್ಯಾಲಯಗಳ 6ನೇ ತರಗತಿಯ ಪ್ರವೇಶ ಪರೀಕ್ಷೆ ಮುಂದೂಡಿಕೆ - ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ ಸುದ್ದಿ
ಪರೀಕ್ಷೆಯನ್ನು ಮುಂದೂಡಿರುವ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಮೂಲಕ ವಿದ್ಯಾರ್ಥಿಗಳು,ಪೋಷಕರಿಗೆ ತಿಳಿಸಲು ಸೂಚಿಸಿದೆ..

ಆದರ್ಶ ವಿದ್ಯಾಲಯಗಳ 6ನೇ ತರಗತಿಯ ಪ್ರವೇಶ ಪರೀಕ್ಷೆ ಮುಂದೂಡಿಕೆ
ಏಪ್ರಿಲ್ 25ರಂದು ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಪರೀಕ್ಷೆಯನ್ನು ಮುಂದೂಡಿರುವ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಮೂಲಕ ವಿದ್ಯಾರ್ಥಿಗಳು,ಪೋಷಕರಿಗೆ ತಿಳಿಸಲು ಸೂಚಿಸಿದೆ.