ಕರ್ನಾಟಕ

karnataka

ETV Bharat / state

ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ ಗರಿಷ್ಠ 3 ವರ್ಷ ಶಿಕ್ಷೆ, 1 ಲಕ್ಷ ದಂಡ - ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ

Advocates Protection Bill: ವಿಧಾನಸಭೆಯಲ್ಲಿ ವಕೀಲರ ಸಂರಕ್ಷಣಾ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಹೆಚ್ ಕೆ ಪಾಟೀಲ್ ಮಂಡಿಸಿದರು.

advocates-protection-bill-presented-at-assembly-session
ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ವಕೀಲರಿಗೆ ಹಲ್ಲೆ ಮಾಡಿದವರಿಗೆ ಗರಿಷ್ಠ 3 ವರ್ಷ ಶಿಕ್ಷೆ, 1 ಲಕ್ಷ ದಂಡ

By ETV Bharat Karnataka Team

Published : Dec 11, 2023, 10:27 PM IST

Updated : Dec 11, 2023, 11:04 PM IST

ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ

ಬೆಳಗಾವಿ/ಬೆಂಗಳೂರು:ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸುವ 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಹೆಚ್ ಕೆ ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ವಕೀಲರ ಮೇಲೆ ಹಲ್ಲೆ ತಡೆಯುವ ನಿಟ್ಟಿನಲ್ಲಿ ಈ ವಿಧೇಯಕ ತರಲಾಗಿದೆ. ಹಲ್ಲೆ ಮಾಡಿದ ವ್ಯಕ್ತಿಗೆ 6 ತಿಂಗಳಿಂದ 3 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ಪೊಲೀಸರು ಯಾವೊಬ್ಬ ವಕೀಲರನ್ನು ಬಂಧಿಸಿದರೆ 24 ಗಂಟೆಯೊಳಗಾಗಿ ವಕೀಲರ ಸಂಘಕ್ಕೆ ಮಾಹಿತಿ ನೀಡಬೇಕು. ಬೆದರಿಕೆ, ಕೆಲಸಕ್ಕೆ ಅಡ್ಡಿ, ಕಿರುಕುಳ ನೀಡಿದರೆ ಶಿಕ್ಷೆ ಇದೆ. ದೇಶ- ವಿದೇಶದಲ್ಲಿ ಮುಕ್ತವಾಗಿ ಪ್ರಯಾಣಿಸಲು ಹಾಗೂ ಕಕ್ಷಿದಾರರೊಂದಿಗೆ ಸಮಾಲೋಚಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ವಕೀಲರ ಸಂಘ ಮನವಿ ಮಾಡಿತ್ತು. ಈ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 10ನೇ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ಸಂರಕ್ಷಣಾ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ಸರ್ಕಾರ ವಕೀಲರ ಸಂರಕ್ಷಣಾ ವಿಧೇಯಕವನ್ನು ಮಂಡನೆ ಮಾಡಿದೆ.

ವಕೀಲರ ಸಂತಸ:ವಕೀಲರ ರಕ್ಷಣೆಗೆ ಕಾಯಿದೆ ರಚನೆ ಮಾಡಬೇಕು ಎಂಬುದಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ರಾಜ್ಯದ ವಕೀಲರ ಸಮುದಾಯಕ್ಕೆ ಜಯ ಸಿಕ್ಕಂತಾಗಿದೆ. ಈ ಕುರಿತಂತೆ ಹರ್ಷವ್ಯಕ್ತಪಡಿಸಿರುವ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ವಿಧೇಯಕ ಮಂಡನೆಗೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್ ಕೆ ಪಾಟೀಲ್, ಅಡ್ವೇಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರಿಗೆ ಕಾಯಿದೆ ಜಾರಿಗೆ ಹೋರಾಟ ನಡೆಸಿದ ವಕೀಲರ ಸಮುದಾಯಕ್ಕೆ ಧನ್ಯವಾದ ತಿಳಿಸಿದ್ದಾರೆ.

ವಿಧೇಯಕದ ಉದ್ದೇಶ ಮತ್ತು ಕಾರಣಗಳೇನು?

  1. ವಕೀಲರು ತಮ್ಮ ವೃತ್ತೀಯ ಕರ್ತವ್ಯಗಳ ಯುಕ್ತ ನಿರ್ವಹಣೆಯಲ್ಲಿ ತಮ್ಮ ಕರ್ತವ್ಯಗಳ ನಿರ್ವಹಣೆಯನ್ನು ಅಡ್ಡಿಪಡಿಸುವ ಅಂದರೆ ನ್ಯಾಯ ದೊರಕಿಸಿಕೊಡುವಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಹೊಂದಿರುವವರಿಂದ ಕಿರುಕುಳಕಾರಿ ಅಥವಾ ತೊಂದರೆ ಕೃತ್ಯಗಳಿಂದ ರಕ್ಷಣೆ.
  2. ಮಾನ್ಯ ಮಾಡಿದ ವೃತ್ತಿಪರ ಕರ್ತವ್ಯಗಳು ಮತ್ತು ನೈತಿಕತೆಗಳ ಅನುಸಾರವಾಗಿ ತೆಗೆದುಕೊಂಡ ಯಾವುದೇ ಕ್ರಮಕ್ಕಾಗಿ ಅಭಿಯೋಜನೆ ಅಥವಾ ಆಡಳಿತಾತ್ಮಕ, ಆರ್ಥಿಕ ಅಥವಾ ಇತರ ನಿರ್ಬಂಧಗಳನ್ನು ಅನುಭವಿಸುವಂತಿಲ್ಲ ಅಥವಾ ಭಯಪಡತಕ್ಕದ್ದಲ್ಲ ಎಂಬುದನ್ನು ಸರ್ಕಾರಗಳು ಖಚಿತಪಡಿಸಬೇಕು.
  3. ವಕೀಲರು ತಮ್ಮ ಪ್ರಕಾರ್ಯಗಳ ನಿರ್ವಹಣೆ ಮಾಡುವಲ್ಲಿ ಅವರ ಭದ್ರತೆಗೆ ಬೆದರಿಕೆ ಒಡ್ಡಿದಾಗ ಪ್ರಾಧಿಕಾರಗಳು ಅವರನ್ನು ಸಂಪೂರ್ಣವಾಗಿ ಸಂರಕ್ಷಿಸಬೇಕು.
  4. ವಕೀಲರು ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೇ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸುವುದಕ್ಕಾಗಿ ಹಾಗೂ ಅದಕ್ಕೆ ಸಂಬಂಧಿಸಿದ ಮತ್ತು ಪ್ರಾಸಂಗಿಕವಾದ ವಿಷಯಗಳಿಗಾಗಿ ಅವರ ಮೇಲಿನ ಹಿಂಸೆ ನಿಷೇಧಿಸುವುದು ಮತ್ತು ರಕ್ಷಣೆ ನೀಡುವುದು.

ಇದನ್ನೂ ಓದಿ:ವಿಧಾನಸಭೆಯಲ್ಲಿ 3,542.10 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳ ಪ್ರಸ್ತಾವನೆ ಮಂಡನೆ

Last Updated : Dec 11, 2023, 11:04 PM IST

ABOUT THE AUTHOR

...view details