ಬೆಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಅಸಂವಿಧಾನಿಕವಾಗಿದ್ದು, ಇದು ನ್ಯಾಯಾಂಗ ನಿಂದನೆಯಾಗಿದೆ ಎಂದು ವಕೀಲ ಅಮೃತೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ತೀರ್ಪು ನೀಡಿತ್ತು. ತೀರ್ಪು ಸಂಬಂಧ ಮುಸ್ಲಿಂ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿ, ಪ್ರತಿಭಟನೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವುದಾಗಿ ಮಾಹಿತಿ ನೀಡಿದರು.
ಹಿಜಾಬ್ ತೀರ್ಪು ಸಂಬಂಧ ಬಂದ್ಗೆ ಕರೆ ನೀಡಿದ್ದು ನ್ಯಾಯಾಂಗ ನಿಂದನೆ: ರಿಟ್ ಸಲ್ಲಿಕೆ ಇದನ್ನೂ ಓದಿ: ಸ್ವಗ್ರಾಮದಲ್ಲಿ 'ನವೀನ್' ಪಾರ್ಥಿವ ಶರೀರದ ಅಂತಿಮ ಮೆರವಣಿಗೆ.. ಸಾವಿರಾರು ಜನರು ಭಾಗಿ
ತೀರ್ಪು ಹಿನ್ನೆಲೆ ಕೆಲ ಸಂಘಟನೆಗಳ ವ್ಯಕ್ತಿಗಳು ಟೀಕಿಸುವ ಭರದಲ್ಲಿ ನ್ಯಾಯಾಂಗ ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದಾರೆ. ನ್ಯಾಯಮೂರ್ತಿಗಳಿಗೆ ಒತ್ತಡ ಬಂದಿತ್ತು ಎಂಬಂತಹ ಮಾತುಗಳು ಕೇಳಿಬಂದಿವೆ. ತೀರ್ಪು ನೀಡಿದ ಜಡ್ಜ್ ಗಳಿಗೂ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆ ಸರಿಯಲ್ಲ ಎಂದು ವಕೀಲರು ಹೇಳಿದರು.