ಬೆಂಗಳೂರು: ಈ ಬಾರಿಯ ಏರ್ ಶೋ ಅದ್ಧೂರಿಯಾಗಿ ನಡೆಯಲಿದ್ದು, ಯಶಸ್ವಿಯಾಗುವ ಪೂರ್ಣ ವಿಶ್ವಾಸವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು. ಸಭೆಯಲ್ಲಿ ಸಿಎಂ ಯಡಿಯೂರಪ್ಪ, ರಕ್ಷಣಾ ವಸ್ತು ಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ವಾಯುಪಡೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಫೆ. 3 ರಿಂದ ಆರಂಭಗೊಳ್ಳಲಿರುವ ಏರೋ ಇಂಡಿಯಾ ಶೋ ಹಿನ್ನೆಲೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಎಲ್ಲಾ ಪೂರ್ವತಯಾರಿ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಿದ್ದೇವೆ. ಏರ್ ಶೋ ಯಶಸ್ವಿಯಾಗಿ ನಡೆಸಲು ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ ಎಂದರು.
ಓದಿ...17 ಸಾವಿರ ಕೋಟಿ ರೂ. ಹಗರಣ: ರೋಸ್ ವ್ಯಾಲಿ ಗ್ರೂಪ್ ಮುಖ್ಯಸ್ಥನ ಪತ್ನಿ ಅರೆಸ್ಟ್
ಏರ್ ಶೋ ಅದ್ಧೂರಿ ಹಾಗೂ ಯಶಸ್ವಿಯಾಗಿ ನಡೆಯುತ್ತೆ ಎಂಬ ವಿಶ್ವಾಸ ಇದೆ. ಏರ್ ಇಂಡಿಯಾ ಶೋ ಆಯೋಜಿಸುವ ಬಗ್ಗೆ ಬೆಂಗಳೂರಿಗೆ ಇರುವ ಅನುಭವ ದೇಶದ ಇತರ ಯಾವ ನಗರಗಳಿಗೂ ಇಲ್ಲ. ವೈಮಾನಿಕ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದೆ. ಕಳೆದ ಬಾರಿಯ ಅವಘಡ ಮರುಕಳಿಸದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಮಧ್ಯೆ ಮಾರ್ಗಸೂಚಿಯನ್ವಯ ಎಲ್ಲಾ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.