ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಆದರೆ ಕೊರೊನಾ ಟೆಸ್ಟ್ ನಡೆಸಿದ ಬಳಿಕ ಪೊಲೀಸರ ವಶದಲ್ಲಿರುವ ಆರೋಪಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾದರಾಯನಪುರದ ಕಿಡಿಗೇಡಿಗಳಿಗೆ ಬಿಡುಗಡೆ ಭಾಗ್ಯವಿಲ್ಲ: ಯಾಕೆ ಗೊತ್ತಾ? - Accuses of Padarayanapura
ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ ಕೊರೊನಾ ಟೆಸ್ಟ್ ನಡೆಸಿದ ಬಳಿಕವೇ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿದೆ.

ಪಾದರಾಯನಪುರದ ಸುಮಾರು 126 ಮಂದಿ ಪೊಲೀಸರ ವಶದಲ್ಲಿದ್ದಾರೆ. ಈಗಾಗಲೇ ನ್ಯಾಯಾಲಯ ಕೂಡ ಆರೋಪಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸಿ ಪಾಸಿಟಿವ್ ಬಂದರೆ ಆರೋಗ್ಯ ಇಲಾಖೆ ನಿಯಮದ ಪ್ರಕಾರ ನಡೆದುಕೊಳ್ಳುವಂತೆ ಸೂಚಿಸಿದೆ. ಹೀಗಾಗಿ ಜಾಮೀನು ಸಿಕ್ಕರೂ ಬಿಡುಗಡೆಯಾಗಬೇಕಾದರೆ ನೆಗೆಟಿವ್ ರಿಪೋರ್ಟ್ ಬರಬೇಕು.
ಈ ಹಿಂದೆ ಪಾದರಾಯನಪುರದ ಬಳಿ ಬಿಬಿಎಂಪಿ ಹಾಗೂ ಆರೋಗ್ಯಾಧಿಕಾರಿಗಳು ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದ 58 ಜನರನ್ನ ಕ್ವಾರಂಟೈನ್ ಮಾಡಲು ಕರೆದುಕೊಂಡು ಬರುತ್ತಿದ್ದರು. ಈ ವೇಳೆ 126 ಆರೋಪಿಗಳು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಸೀಲ್ಡೌನ್ಗೆ ಅಳವಡಿಸಿದ್ದ ಮಾಡಿದ್ದ ಬ್ಯಾರಿಕೇಡ್ಗಳನ್ನು ಕಿತ್ತು ಹಾಕಿ, ರಂಪಾಟ ಮಾಡಿದ್ದರು. ಬಳಿಕ ಆರೋಪಿಗಳನ್ನ ಬಂಧಿಸಿದ ಪೊಲೀಸರು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದರು. ಈ ಆರೋಪಿಗಳ ಪೈಕಿ ಕೆಲವರಿಗೆ ಕೊರೊನಾ ಸೋಂಕು ಇದ್ದ ಹಿನ್ನೆಲೆ ನಗರದ ಹಜ್ಭವನದಲ್ಲಿ ಇರಿಸಲಾಗಿತ್ತು. ಸದ್ಯ ಜಾಮೀನು ಸಿಕ್ಕಿದ್ದರೂ ಕೂಡ ಕೊರೊನಾ ಟೆಸ್ಟ್ ಪಾಸ್ ಆದ ಬಳಿಕ ಹೊರ ಬರಬೇಕಾದ ಅನಿವಾರ್ಯತೆ ಎದುರಾಗಿದೆ.