ಕರ್ನಾಟಕ

karnataka

ETV Bharat / state

ಮುಂದಿನ ಮೂರು ದಿನದಲ್ಲಿ ಮತ್ತೆ ಮುಂಗಾರು ಬಿರುಸು; ಆರೆಂಜ್, ಎಲ್ಲೋ ಅಲರ್ಟ್ ಘೋಷಣೆ

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನದಲ್ಲಿ ಮತ್ತೆ ಭಾರೀ ಮಳೆ ಸುರಿಯಲಿದೆಯಂತೆ. ಹಾಗಾಗಿ ಆಯಾ ಜಿಲ್ಲೆಯಲ್ಲಿ ಆರೆಂಜ್, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮತ್ತೆ ಮುಂಗಾರು ಬಿರುಸು
ಮತ್ತೆ ಮುಂಗಾರು ಬಿರುಸು

By

Published : Sep 1, 2020, 9:33 PM IST

Updated : Sep 1, 2020, 10:45 PM IST

ಬೆಂಗಳೂರು:ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಮುಂದಿನ ಮೂರು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಈ ಬಗ್ಗೆ ಮಾತನಾಡಿದ ಹವಾಮಾನ ಮುನ್ಸೂಚನೆ ನಿರ್ದೇಶಕ ಸಿ.ಎಸ್. ಪಾಟೀಲ್, ಕರಾವಳಿ ಜಿಲ್ಲೆಗಳಲ್ಲಿ ಸೆ. 5ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹಾಗಾಗಿ ಸೆ. 2, 3 ಹಾಗೂ 4 ರಂದು ಎಲ್ಲೋ ಅಲರ್ಟ್ ನೀಡಲಾಗಿದೆ ಎಂದರು.

ಹವಾಮಾನ ಮುನ್ಸೂಚನೆ ನಿರ್ದೇಶಕ ಸಿ.ಎಸ್. ಪಾಟೀಲ್

ಉತ್ತರ ಒಳನಾಡಿನಲ್ಲಿ ಸೆ.1 ರಂದು ಕೆಲವು ಕಡೆ, ಸೆ.2 ಹಾಗೂ 3 ರಂದು ಬಹುತೇಕ ಎಲ್ಲಾ ಕಡೆ ಮಳೆಯಾಗಬಹುದು. ಸೆ. 4-5 ರಂದು ಸಹ ಮಳೆಯ ಪ್ರಮಾಣ ಏರಿಕೆಯಾಗಲಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಸೆ.1 ರಿಂದ 5ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸೆ.2-3 ಹಾಗೂ 4 ರಂದು ಭಾರೀ ಹಾಗೂ ಅತಿಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೆ. 1 ಹಾಗೂ 5 ರಂದು ಎಲ್ಲೋ ಅಲರ್ಟ್ ನೀಡಲಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಕೂಡ ಸೆ.1 ಹಾಗೂ 5 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

Last Updated : Sep 1, 2020, 10:45 PM IST

ABOUT THE AUTHOR

...view details